ಈಗಾಗಲೇ ಉಪಮುಖ್ಯಮಂತ್ರಿಯಾಗಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆ.ಎಚ್.ಮುನಿಯಪ್ಪ, ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರೆಯಲಿದ್ದಾರೆ. ಹಾಗೆಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿದ್ದಾರೆ.
ಅಂತಿಮವಾಗಿ ನಾಯಕತ್ವ ಬದಲಾವಣೆ ಮಾಡುವ ಅಥಿಕಾರ ಹೈಕಮಾಂಡ್ ಗೆ ಸೇರಿದ್ದು ಎಂದು ಸ್ಪಷ್ಟಪಡಿಸಿದ್ದಾರೆ.


