Tuesday, January 20, 2026
Google search engine
Homeಮುಖಪುಟನ.28ರಿಂದ 5 ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನ.28ರಿಂದ 5 ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ನ.28ರಂದು ಬೆಂಗಳೂರಿನಲ್ಲಿ ನಡೆಯುಲಿರುವ ಕಾರ್ಯಕ್ರಮದಲ್ಲಿ ಐದು ಸಾವಿರ ಅಂಗನವಾಡಿಗಳಲ್ಲಿ ಎಲ್ಕೆಜಿ-ಯುಕೆಜಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದೂ ಸೇರಿದಂತೆ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗೆ ಪೂರಕ ಮಹತ್ತರ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರಿನಲ್ಲಿ ಹಮ್ಮಿಕೊಂಡಿದ್ದ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕಪಡೆ ಲೋಕಾರ್ಪಣೆ ಹಾಗೂ ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತ ರಾಜ್ಯ ಮಟ್ಟದ ಸಮಾವೇಶಕ್ಕೆ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಬಲಿಷ್ಠ ಭಾರತ ನಿರ್ಮಾಣದ ಕನಸು ಹೊತ್ತು 1975ರಲ್ಲಿ ಆರಂಭಿಸಿದ ಸಮಗ್ರ ಶಿಶು ಅಭಿವದ್ಧಿ ಸೇವೆಗಳ ಯೋಜನೆ ಐಸಿಡಿಎಸ್‌ಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ನ.28ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಜ್ಯದಲ್ಲಿ ಮತ್ತೊಂದು ಮೈಲಿಗಲ್ಲು ಆಗಲಿದೆ. ಮಹಿಳೆ ಮತ್ತು ಮಕ್ಕಳ ಸಬಲೀಕರಣಕ್ಕಾಗಿ ಪ್ರಮುಖ ಮೂರು ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು ರಾಜ್ಯದ ಐದು ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ-ಯುಕೆಜಿ ಪೂರ್ವಪ್ರಾಥಮಿಕ ಆರಂಭಿಸಲಾಗುತ್ತಿದೆ ಎಂದರು.
ಖಾಸಗಿ ಶಾಲೆಗಳಲ್ಲಿ ಸಿಗುವಂತಹ ಗುಣಮಟ್ಟದ ಹಾಗೂ ಇಂಗ್ಲಿಷ್ ಶಿಕ್ಷಣ ಬಡಮಕ್ಕಳಿಗೂ ಸಿಗಬೇಕು ಎಂಬುದನ್ನ ಮನಗಂಡ ರಾಜ್ಯ ಸರ್ಕಾರ ಅಂಗನವಾಡಿಗಳಲ್ಲಿ ಎಲ್ಕೆಜಿ-ಯುಕೆಜಿ ತರಗತಿಗಳನ್ನು ಆರಂಭಿಸಲು ಮುಂದಾಗಿದೆ. ರಾಜ್ಯದ ಒಟ್ಟಾರೆ ಎಲ್ಲ ಅಂಗನವಾಡಿಗಳ ಪೈಕಿ 17 ಸಾವಿರ ಕಾರ್ಯಕರ್ತರು ಪದವೀಧರರಿದ್ದು 4 ಸಾವಿರ ಕಾರ್ಯಕರ್ತರು ಸ್ನಾತಕೋತ್ತರ ಪದವಿಧರರಿರುವುದನ್ನು ಗುರುತಿಸಲಾಗಿದೆ. ಇವರನ್ನು ಬಳಸಿಕೊಂಡು ಮೊದಲ ಹಂತದಲ್ಲಿ ಐದು ಸಾವಿರ ಅಂಗನವಾಡಿಗಳನ್ನು ನ. 28ರಂದು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ್ ಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ.ಸಿದ್ದರಾಮಣ್ಣ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular