ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆ, ದಲಿತ ಮುಖ್ಯಮಂತ್ರಿ ಕೂಗು ಕುರಿತು ಚರ್ಚೆಗಳ ನಡೆಯುತ್ತಿರುವ ನಡುವೆಯೇ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಭೇಟಿ ಮಾಡಿ ಚರ್ಚಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಈ ಸಂಬಂಧ ಫೇಸ್ಬಕ್ ನಲ್ಲಿ ಬರೆದುಕೊಂಡಿರುವ ಸಚಿವ ಕೆ.ಎಚ್.ಮುನಿಯಪ್ಪ, ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ನಮ್ಮ ನಿವಾಸಕ್ಕೆ ಭೇಟಿ ನೀಡಿದ್ದರು. ಭೇಟಿಯ ವೇಳೆ ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಸಭೆಯಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
ಈ ವೇಳೆ ಮಾಜಿ ಸಚಿವರು ಹೆಚ್. ಆಂಜನೇಯ,ಮಾಜಿ ಸಂಸದರು ಚಂದ್ರಪ್ಪ, ಮಾಜಿ ಶಾಸಕರಾದ ವೆಂಕಟರಮಣಯ್ಯ, ರಾಜೀವ್ ಗೌಡ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು ಎಂದು ಮುನಿಯಪ್ಪ ಹೇಳಿದ್ದಾರೆ.


