ದಾವಣಗೆರೆಯ ಮಾಜಿ ಸಚಿವ ಮತ್ತು ಹಾಲಿ ಶಾಸಕ ಶಾಮನೂರು ಶಿವಶಂಕಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.
ಶಿವಶಂಕರಪ್ಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎಸ್.ಎಂ. ಕೃಷ್ಣ ಸರ್ಕಾರದಲ್ಲಿ ತೋಟಗಾರಿಕಾ ಇಲಾಖೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.
ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿ 30 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಅತ್ಯಂತ ಹಿರಿಯ ರಾಜಕಾರಣಿ ಎಂಬ ಹಿರಿಮೆಗೂ ಪಾತ್ರರಾಗಿದ್ದರು.
ಜೂನ್ 16, 1930 ಜನಿಸಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.
1970ರಲ್ಲಿ ಬೆಂಗಳೂರಿಗೆ ಬಂದ ಬೋರೇಗೌಡ ಚಲನಚಿತ್ರದ ಸಹ ನಿರ್ಮಾಪಕರಾಗಿ ಕೆಲಸ ಮಾಡಿದ್ದರು.


