ಈಗ ನಾನೇ ಮುಖ್ಯಮಂತ್ರಿಯಾಗಿದ್ದೇನೆ. ಮುಂದೆ ಹೈಕಮಾಂಡ್ ಹೇಳೋವರೆಗೂ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ(ಡಿ.19) ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಹೇಳೋವರೆಗೂ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಹೇಳಿದರು.
ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ಬಿಜೆಪಿ ಸದಸ್ಯರಾದ ಸುನಿಲ್ ಕುಮಾರ್, ಮುನಿರತ್ನ ಮುಖ್ಯಮಂತ್ರಿಗಳನ್ನು ನೀವು ಎರಡೂವರೆ ವರ್ಷದ ಸಿಎಂ ಎಂದು ಹೇಳಲಾಗುತ್ತಿದೆ ಎಂದು ಕಿಚಾಯಿಸಿದರು.
ಇದಕ್ಕೆ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ಅವಧಿಯನ್ನು ಪೂರೈಸುತ್ತೇನೆ ಎಂದು ಹೇಳಿದ್ದರು. ಆದರೆ ಯಡಿಯೂರಪ್ಪ ಅವರನ್ನು ಕೆಳಗೆ ಇಳಿಸಲಾಯಿತು. ಇದಕ್ಕೆ ಏನ್ ಹೇಳ್ತೀರಿ ಎಂದರು.
ನಾನು ರಾಜಕೀಯದ ಬಗ್ಗೆ ನಿಶ್ಯಕ್ತಿಯಾಗಿಲ್ಲ. ನನ್ನ ಆರೋಗ್ಯದಲ್ಲಿ ನಿಶ್ಯಕ್ತಿಯಾಗಿದ್ದೇನೆ. ನಾನು 2028ರ ಚುನಾವಣೆಯಲ್ಲೂ ಸಕ್ರಿಯನಾಗಿರುತ್ತೇನೆ ಎಂದು ಹೇಳಿದರು.


