Tuesday, January 20, 2026
Google search engine
Homeಮುಖಪುಟನಾಯಕತ್ವ ಬದಲಾವಣೆ-ರಾಹುಲ್ ಗಾಂಧಿ ತೀರ್ಮಾನವೇ ಅಂತಿಮ-ಸಿದ್ದರಾಮಯ್ಯ

ನಾಯಕತ್ವ ಬದಲಾವಣೆ-ರಾಹುಲ್ ಗಾಂಧಿ ತೀರ್ಮಾನವೇ ಅಂತಿಮ-ಸಿದ್ದರಾಮಯ್ಯ

ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ. ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಸ್ಪಷ್ಟಪಡಿಸಿದರು.

ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ ಎಂದರು.

ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವೇ ಇಲ್ಲ ಎಂದು ಹೇಳಿದರು.

ಕೆ.ಎನ್.ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ಎಸ್.ಎಂ.ಕೃಷ್ಣನವರ ಸರ್ಕಾರ. ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆದರ ಪ್ರಶ್ನೆಯೇ ಇಲ್ಲ. ಎಸ್.ಎಂ.ಕೃಷ್ಣ ಅವರು ಆಗ ಮುಖ್ಯಮಂತ್ರಿಗಳಿದ್ದರು, ಅವರ ಸರ್ಕಾರ ಮಾಡಿತ್ತು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular