Tuesday, January 20, 2026
Google search engine
Homeಜಿಲ್ಲೆಜ.21ರಂದು ಡಾ.ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ

ಜ.21ರಂದು ಡಾ.ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ

ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವದಲ್ಲಿ ಭಾಗಿಯಾಗಲು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಜ.21 ರಂದು ಸಿದ್ದಗಂಗಾ ಮಠಕ್ಕೆ ಆಗಮಿಸಲಿದ್ದಾರೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಸಿದ್ದಗಂಗಾ ಮಠದಲ್ಲಿ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀಗಳ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸೋಮಣ್ಣ, ಜ. 21 ರಂದು ನಡೆಯಲಿರುವ ಶ್ರೀಗಳ ಪುಣ್ಯ ಸಂಸ್ಮರಣೋತ್ಸವದಲ್ಲಿ ದೇಶದ ಉಪರಾಷ್ಟ್ರಪತಿಗಳು ಭಾಗವಹಿಸಿ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಇದೇ ಮೊದಲ ಬಾರಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮಠಕ್ಕೆ ಭೇಟಿ ನೀಡುತ್ತಿದ್ದಾರೆ. ಇವರು ಲೋಕಸಭಾ ಸದಸ್ಯರಾಗಿ, ರಾಜ್ಯಪಾಲರಾಗಿ ಅಪಾರ ಅನುಭವ ಹೊಂದಿದ್ದಾರೆ ಎಂದು ಹೇಳಿದರು.

ಜ. 21 ರಂದು ಬೆಳಿಗ್ಗೆ 11 ಗಂಟೆಗೆ ಮಠದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನಡೆಯಲಿರುವ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ 7ನೇ ವರ್ಷದ ಸಂಸ್ಮರಣೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಹಿಸುವರು ಎಂದರು.

ಸಮಾರಂಭದ ನೇತೃತ್ವವನ್ನು ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಸದ್ಗುರು ಮಧುಸೂದನ ಸಾಯಿ ಹಾಗೂ ಶಿವಸಿದ್ದೇಶ್ವರ ಸ್ವಾಮೀಜಿ ಭಾಗವಹಿಸುವರು.

ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ವಿ. ಸೋಮಣ್ಣ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೇರಿದಂತೆ ವಿವಿಧ ಮಠಾಧೀಶರು, ಜಿಲ್ಲೆಯ ಸಂಸದರು, ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಗಣ್ಯರು ಭಾಗವಹಿಸಲಿದ್ದಾರೆ.

ಶ್ರೀಗಳ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮಕ್ಕೆ ಭದ್ರತೆ, ದಾಸೋಹ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ದತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಶಾಸಕರಾದ ಬಿ. ಸುರೇಶ್‌ಗೌಡ, ಜ್ಯೋತಿಗಣೇಶ್, ಡಿಸಿ ಶುಭ ಕಲ್ಯಾಣ್, ಎಸ್‌ಪಿ ಕೆ.ವಿ. ಅಶೋಕ್ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular