Tuesday, January 20, 2026
Google search engine
Homeಮುಖಪುಟಉದ್ಯೋಗ ಖಾತ್ರಿ ಯೋಜನೆ ಹೆಸರು ಬದಲಾವಣೆಗೆ ಆಕ್ಷೇಪ-ಪರಮೇಶ್ವರ್, ಕೆ.ಎನ್.ರಾಜಣ್ಣ ಆಕ್ರೋಶ

ಉದ್ಯೋಗ ಖಾತ್ರಿ ಯೋಜನೆ ಹೆಸರು ಬದಲಾವಣೆಗೆ ಆಕ್ಷೇಪ-ಪರಮೇಶ್ವರ್, ಕೆ.ಎನ್.ರಾಜಣ್ಣ ಆಕ್ರೋಶ

ಗ್ರಾಮೀಣ ಭಾಗದ ಬಡ ಕೃಷಿಕರ, ಕೃಷಿ ಕೂಲಿ ಕಾರ್ಮಿಕರ ಬದುಕಿನ ಭಾಗವಾಗಿದ್ದ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದುಮಾಡುವ ಮೂಲಕ ಮಹಾತ್ಮಗಾಂಧಿಯ ಹೆಸರಿನ ಜೊತೆಗೆ, ಬಡವರ ಬದುಕುವ ಹಕ್ಕನ್ನು ಕೇಂದ್ರ ಸರಕಾರ ಕಸಿದುಕೊಂಡಿದೆ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದರು.

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಯುಪಿಎ ಸರಕಾರ ತಂದ ಹಲವಾರು ಕ್ರಾಂತಿಕಾರಿ ಯೋಜನೆಗಳಲ್ಲಿ ಉದ್ಯೋಗ ಖಾತರಿ ಯೋಜನೆಯೂ ಒಂದು. ಇದರಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿತ್ತು. ಆದರೆ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರಕಾರ ಬಡವರು ಅರ್ಥಿಕವಾಗಿ, ಸಾಮಾಜಿಕವಾಗಿ ಬಲಿಷ್ಠರಾಗುವುದನ್ನು ಒಪ್ಪದೆ, ಬಡವರ ಉದ್ಯೋಗದ ಹಕ್ಕನ್ನು ಕಸಿದುಕೊಂಡು, ವಿಶ್ವ ಸಂಸ್ಥೆಯಲ್ಲಿ ಮನ್ನಣೆಗೆ ಪಾತ್ರವಾಗಿದ್ದ ಎಂ.ಎನ್.ಆರ್.ಇ.ಜಿ.ಎ ಯೋಜನೆಯನ್ನು ರದ್ದು ಮಾಡುವ ಮೂಲಕ ಇಡೀ ವಿಶ್ವವೇ ಶಾಂತಿಧೂತನೆಂದು ಒಪ್ಪುವ ಗಾಂಧೀಜಿ ವಿರುದ್ದ ತನ್ನ ಹಗೆತನವನ್ನು ಮುಂದುವರೆಸಿದೆ ಎಂದು ಆಕ್ಷೇಪಿಸಿದರು.

ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ 2002ರಲ್ಲಿ ಜಾತಿಗೆ ತಂದ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಿಂದ ಕರ್ನಾಟಕದಲ್ಲಿ ಇದುವರೆಗೆ 86.55 ಲಕ್ಷ ಮಾನವ ದಿನಗಳನ್ನು ಸೃಜಿಸಿದೆ. 56492 ಕೋಟಿ ರೂಗಳನ್ನು ಕೃಷಿಕರು ಮತ್ತು ಕೃಷಿ ಕೂಲಿ ಕಾರ್ಮಿಕರಿಗೆ ನೀಡಲಾಗಿದೆ.ಕೋಟ್ಯಂತ ರೂಗಳ ರಸ್ತೆ, ಚರಂಡಿ, ಬದು, ಕೆರೆಗಳು ಹೂಳೆತ್ತುವುದು, ಶಾಲಾ ಕೊಠಡಿ ನಿರ್ಮಾಣ, ಕಾಂಪೌಂಡ್ ನಿರ್ಮಾಣ, ಹೀಗೆ ಹತ್ತು ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಂಡು ಶಾಶ್ವತ ಆಸ್ತಿಗಳನ್ನು ಸೃಜಿಸಲಾಗಿದೆ ಎಂದರು.

ಮಾಜಿ ಮಂತ್ರಿ ಹಾಗೂ ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಮಾತನಾಡಿ, ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ನಿರುದ್ಯೋಗ ನಿವಾರಣೆಗೆ ನಮ್ಮ ಸರಕಾರ ಜಾರಿಗೆ ತಂದಿದ್ದ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಿಂದ ಹೆಚ್ಚು ಪ್ರಯೋಜನವನ್ನು ಜನರು ಪಡೆದಿದ್ದರು.ಆದರೆ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರ ಯೋಜನೆಯ ಹೆಸರು ಬದಲಾಯಿಸಿ, ವಿಕೇಂದ್ರೀಕರಣ ವ್ಯವಸ್ಥೆಯನ್ನು ಕೇಂದ್ರೀಕರಣಗೊಳಿಸಿ, ಗ್ರಾಮಸಭೆಗಳ ಅಧಿಕಾರವನ್ನು ಮೊಟಕುಗೊಳಿಸುವ ಮೂಲಕ ಅಪಹಾಸ್ಯ ಮಾಡಿದೆ.ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಲು ಈ ಯೋಜನೆಯ ಮೂಲಕ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸಿದೆ ಎಂದು ಟೀಕಿಸಿದರು.

ನರೇಗಾದಲ್ಲಿ ಭ್ರಷ್ಟಾಚಾರ ಆಗಿದೆ ಎನ್ನುವುದಾದರೆ ಅಧಿಕಾರದಲ್ಲಿ ಬಿಜೆಪಿ ನೇತೃತ್ವದ ಸರಕಾರವೇ ಇದೆ.ತನಿಖೆ ಮಾಡಿಒ ತಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಿ, ಇದಕ್ಕೆ ನಮ್ಮ ಅಭ್ಯಂತರವಿಲ್ಲ.ಆದರೆ 11 ವರ್ಷದಿಂದ ಸುಮ್ಮನಿದ್ದು, ಈಗ ಅವ್ಯವಹಾರದ ಮಾತನಾಡುವುದು ಸರಿಯಲ್ಲ.ಇದೊಂದು ಅಸಮರ್ಥ ಸರಕಾರ ಎನ್ನುವುದನ್ನು ಒಪ್ಪಿಕೊಳ್ಳಲಿ ಎಂದು ಕೆ.ಎನ್.ರಾಜಣ್ಣ ತಿಳಿಸಿದರು.

ಮಾಧ್ಯಮಗೋಷ್ಟಿಯಲ್ಲಿ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಶಾಸಕರಾದ ಹೆಚ್.ವಿ.ವೆಂಕಟೇಶ್, ಎಂ.ಎಲ್.ಸಿ. ರಮೇಶ್‌ಬಾಬು, ಮಾಜಿ ಶಾಸಕರಾದ ಡಿ.ಸಿ.ಗೌರಿಶಂಕರ್, ಡಾ.ಎಸ್.ಷಪಿಅಹಮದ್, ಡಾ.ರಫೀಕ್ ಅಹಮದ್, ಗಂಗಹನುಮಯ್ಯ, ಮುಖಂಡರಾದ ಆರ್.ರಾಮಕೃಷ್ಣ, ಇಕ್ಬಾಲ್ ಅಹಮದ್,ಷಣ್ಮುಖಪ್ಪ,ದರ್ಶನ್ ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular