Thursday, January 29, 2026
Google search engine
Homeಮುಖಪುಟಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡರೂ ಅಧಿಕಾರಕ್ಕೆ ಬರುವುದಿಲ್ಲ-ಸಿಎಂ ಸಿದ್ದರಾಮಯ್ಯ

ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡರೂ ಅಧಿಕಾರಕ್ಕೆ ಬರುವುದಿಲ್ಲ-ಸಿಎಂ ಸಿದ್ದರಾಮಯ್ಯ

ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ನಮ್ಮಲ್ಲಿ ಕೌಶಲ್ಯವಿರುವ ಮಾನವ ಸಂಪನ್ಮೂಲದ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ, ತರಬೇತಿ ಪಡೆವರಿಗೆ ನೂರರಷ್ಟು ಕೆಲಸ ದೊರೆಯುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ತಿಳಿಸಿದ್ದಾರೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕೆಂದು ಸಂವಿಧಾನದ 176 ಮತ್ತು 163 ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಹೇಳಿದೆ. ಸರ್ಕಾರ ಕೊಟ್ಟಿರುವ ಭಾಷಣವನ್ನು ಅವರು ಓದಲೇಬೇಕು. ನಾವು ಬರೆದುಕೊಟ್ಟಿರುವುದನ್ನು ಅವರು ಬದಲಾಯಿಸುವ ಸಾಧ್ಯತೆ ಇರುತ್ತದೆ ಎಂದರು.

ಗಣರಾಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಪತ್ರ ವ್ಯವಹಾರವೆಲ್ಲಾ ಆಗಿದ್ದರೂ, ಕೇಂದ್ರ ಸರ್ಕಾರ ಆಯ್ಕೆ ಮಾಡಿಲ್ಲ ಎನ್ನುವುದು ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾನೂನಿನ ಪ್ರಕಾರ ಪ್ರಜ್ವಲ್ ರೇವಣ್ಣ ಅವರ ಬಂಧನವಾಗಿದ್ದು, ಸರ್ಕಾರ ಅದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಇದೊಂದೇ ಪ್ರಕರಣವಲ್ಲ. ಯಾವುದೇ ಪ್ರಕರಣದಲ್ಲಿಯೂ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ಅಧಿಕಾರಿಗಳಿಗೆ ಸರ್ಕಾರ ಬಹುಮಾನ ಕೊಟ್ಟಿಲ್ಲ. ಅದೆಲ್ಲಾ ಸುಳ್ಳು ಎಂದು ಹೇಳಿದರು.

ನಮಗೂ ಸಮಯ ಬರುತ್ತದೆ ಎಂಬ ಹೆಚ್. ಡಿ.ದೇವೇಗೌಡರ ಮಾತಿನ ಅರ್ಥ ನಮಗೆ ಗೊತ್ತಿಲ್ಲ. 17 ಸ್ಥಾನ ಪಡೆದಿರುವವರು ಅಧಿಕಾರಕ್ಕೆ ಹೇಗೆ ಬರುತ್ತಾರೆ? ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ 140 ಸ್ಥಾನ ಗಳಿಸಿದೆ. 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು ಎನ್ನುವ ಭರವಸೆ ನಮಗಿದೆ. ಜಿಡಿಎಸ್ ಮತ್ತು ಬಿಜೆಪಿಯವರು ಮೈತ್ರಿ ಮಾಡಿಕೊಂಡರು ಅಧಿಕಾರಕ್ಕೆ ಬರುವುದಿಲ್ಲ ಎಂದು ಕುಟುಕಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular