ರಾಜ್ಯದಲ್ಲಿ ಶಿಕ್ಷಕರು ಮತ್ತು ಪದವೀಧರರ ವಿಧಾನ ಪರಿಷತ್ ಕ್ಷೇತ್ರಗಳಿಗೆ ಅಕ್ಟೋಬರ್ 23ರಂದು ನಡೆಯಲಿರುವ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದಲ್ಲಿ ನಾನು ಪ್ರಚಾರ ನಡೆಸಿದ್ದೇನೆ. ಈ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಒಲವು ಇರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ತಿಳಿಸಿದ್ದಾರೆ.
ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಎಐಸಿಸಿ ಮಟ್ಟದಲ್ಲಿ ಚರ್ಚೆ ನಡೆದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಈ ಸಂಬಂಧ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.


