ಪಶ್ಚಿಮ ಬಂಗಾಳದ ಭಾರತೀಯ ಜನತಾ ಪಕ್ಷದ ಸಂಸದ ಅರ್ಜುನ್ ಸಿಂಗ್ ನಿವಾಸದ ಮುಂದೆ ಮೂರು ಕಚ್ಚಾ ಬಾಂಬ್ ಗಳು ಸ್ಫೋಟಗೊಂಡಿದ್ದು ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಸೆಪ್ಟೆಂಬರ್ 8ರಂದು ಮುಂಜಾನೆ 6.10ರ ಸಮಯದಲ್ಲಿ ಬಾಂಬ್ ಗಳು ಸ್ಫೋಟಗೊಂಡಿವೆ. ಮೂರು ಮಂದಿ ಬೈಕ್ ನಲ್ಲಿ ಬಂದು ಬಾಂಬ್ ಎಸೆದುಹೋಗಿದ್ದಾರೆ ಎಂದು ಆರೋಪಿಸಲಾಗಿದೆ.
ಸ್ಥಳಕ್ಕೆ ಪೊಲೀಸರ ತಂಡ ಭೇಟಿ ನೀಡಿದ್ದ ಬಾಂಬ್ ಸ್ಪೋಟದ ಸ್ಥಳ ಪರಿಶೀಲನೆ ಮಾಡಿದ್ದಾರೆ. ಅಕ್ಕಪಕ್ಕದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿರುವ ಪೊಲೀಸರು ಆರೋಪಿಗಳ ಪತ್ತೆ ಶೋಧಕಾರ್ಯ ಕೈಗೊಂಡಿದ್ದಾರೆ.
ಬಾಂಬ್ ಸ್ಪೋಟಕ್ಕೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರೇ ಕಾರಣ ಎಂದು ಪಶ್ಚಿಮಬಂಗಾಳ ಬಿಜೆಪಿ ಅಧ್ಯಕ್ಷರು ಆರೋಪಿಸಿದ್ದಾರೆ.
ಬಾಂಬ್ ಸ್ಫೋಟದಲ್ಲಿ ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ಇದುವರೆಗೆ ಬಹಿರಂಗಪಡಿಸಿಲ್ಲ.
ಸಂಸದ ಅರ್ಜುನ್ ಸಿಂಗ್ ದೆಹಲಿಯಲ್ಲಿದ್ದು ಘಟನೆ ಸಂಬಂಧ ಮಾಹಿತಿ ಪಡೆದಿದ್ದಾರೆ.