ಬೆಂಗಳೂರಿನ ಸ್ಯಾಟಲ್ ಲೈಟ್ ಟೌನ್ ನಿಂದ ಡಾಬಸ್ ಪೇಟೆ ಮತ್ತು ಹೊಸೂರಿಗೆ ಸಂಪರ್ಕ ಕಲ್ಪಿಸುವ ರಿಂಗ್ ರಸ್ತೆಯನ್ನು ಆರು ತಿಂಗಳೊಳಗೆ ಚತುಷ್ಫಥ ರಸ್ತೆಯನ್ನಾಗಿ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಮುಖ್ಯಮಂತ್ರಿಗಳು ಚತುಷ್ಪಥ ನಿರ್ಮಾಣ ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸಚಿವರು ತಿಳಿಸಿದ್ದಾರೆ ಎಂದರು.
ಸ್ವಾಟಲ್ ಲೈಟ್ ಟೌನ್ ನಿಂದ ಒಟ್ಟು 42 ಕಿಲೋ ಮೀಟರ್ ಉದ್ದದ ಚತುಷ್ಪಥ ರಿಂಗ್ ರಸ್ತೆಯನ್ನು ಭಾರತ್ ಮಾಲಾ ಯೋಜನೆಯಡಿ ಕೈಗೊಳ್ಳಲಾಗಿದೆ. ರಿಂಗ್ ರಸ್ತೆ ವಿಸ್ತರಣೆಗಾಗಿ ಭೂಸ್ವಾಧೀನ ಮಾಡಿಕೊಳ್ಳಲು ರಾಜ್ಯ ಸರ್ಕಾರ ಶೇ.30ರಷ್ಟು ಹಣವನ್ನು ಭರಿಸಲಿದೆ ಎಂದು ಬೊಮ್ಮಾಯಿ ತಿಳಿಸಿದರು.
ರಸ್ತೆ ನಿರ್ಮಾಣಕ್ಕೆ ಬೇಕಾಗುವ ಹಣವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದರು. ಹಾಸನ, ಮಾರೇನಹಳ್ಳಿಯಿಂದ ಶಿರಾಡಿಘಾಟ್ ಮತ್ತು ಅಡ್ಡಹೊಳೆ ಮತ್ತು ಬಿ.ಸಿ ರಸ್ತೆವರೆಗೆ ರಸ್ತೆ ನಿರ್ಮಾಣ ಮಾಡಿದರೆ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಇದಕ್ಕೂ ಹೆದ್ದಾರಿ ಸಚಿವರು ಒಪ್ಪಿಗೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರ.