ಯಾವುದೇ ಚರ್ಚೆಯಿಲ್ಲದೆ ರಾಜ್ಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು ನೂತನ ಶಿಕ್ಷಣ ನೀತಿ ಶಿಕ್ಷಣ ವಲಯದ ಖಾಸಗೀಕರಣಕ್ಕೆ ಉತ್ತೇಜನ ನೀಡುತ್ತದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ಆತಂಕ ವ್ಯಕ್ತಪಡಡಿಸಿದ್ದಾರೆ.
ನೂತನ ಶಿಕ್ಷಣ ನೀತಿಯ ಅನುಷ್ಠಾನದಿಂದ ಆಗುವ ಪರಿಣಾಮಗಳ ಕುರಿತು ಚರ್ಚೆ ನಡೆದಿದಲ್ಲ. ಹಾಗಾಗಿ ಸದನದಲ್ಲಿ ಈ ಕುರಿತು ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಹಿಂದಿನಿಂದಲೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಾಂಗ್ರೆಸ್ ವಿರೋಧಿಸಿಕೊಂಡು ಬರುತ್ತಿದೆ. ಇದೊಂದು ಗಂಭೀರ ವಿಷಯವಾಗಿದ್ದು ದೇಶದ ಪ್ರತಿಯೊಬ್ಬ ನಾಗರಿಕರೂ ಈ ಬಗ್ಗೆ ಆಲೋಚಿಸಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ ಅನುಷ್ಠಾನಗೊಳಿಸಿರುವ ಶಿಕ್ಷಣ ನೀತಿ ಬಗ್ಗೆ ಸಂಸತ್ತಿನಲ್ಲಿ ಮತ್ತು ರಾಜ್ಯ ವಿಧಾನಸಭೆಯಲ್ಲಿ ಚರ್ಚೆಯನ್ನೇ ನಡೆಸಿಲ್ಲ. ಜೊತೆಗೆ ಬಿಜೆಪಿ ದೇಶದ ಜನರ ಅಭಿಪ್ರಾಯಗಳನ್ನೇ ಕೇಳದೆ ಅನುಷ್ಠಾನಗೊಳಿಸಿದೆ ಎಂದು ಟೀಕಿಸಿದ್ದಾರೆ.
ಶಿಕ್ಷಣ ವಲಯ ಖಾಸಗಿಯವರ ಕೈಗೆ ಒಪ್ಪಿಸಿದರೆ ಬಡವರು ಅವಕಾಶಗಳಿಂದ ವಂಚಿತರಾಗುತ್ಥಾರೆ. ಆದ್ದರಿಂದ ಚರ್ಚೆಯಿಲ್ಲದೆ ಇಂತಹ ನೀತಿಗಳನ್ನು ಅನುಷ್ಠಾನಕ್ಕೆ ತರುವುದು ಒಳ್ಳೆಯದಲ್ಲ ಎಂದು ಹೇಳಿದ್ದಾರೆ.