ಮುಂದಿನ ವಿಧಾನಸಭಾ ಚುನಾವಣೆಗೆ ಹೊಸ ನಾಯಕತ್ವ ಪರಿಚಯಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರಾಜಿನಾಮೆ ಕೇಳಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಪಂಜಾಬ್ ಕಾಂಗ್ರೆಸ್ ಶಾಸಕರ ಗುಂಪೊಂದು ನಾಯಕತ್ವ ಬದಲಾವಣೆ ಮಾಡುವಂತೆ ಎಐಸಿಸಿಗೆ ಪತ್ರ ಬರೆದಿರುವುದರಿಂದ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಜೊತೆ ದೂರವಾಣಿಯಲ್ಲಿ ಮಾತನಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.
ಶನಿವಾರ ಸಂಜೆ 5 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕರೆದಿದ್ದು ಹೊಸ ನಾಯಕನನ್ನು ಆಯ್ಕೆ ಮಾಡುವಂತೆ ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಸೋನಿಯಾ ಅವರು ರಾಜಿನಾಮೆಗೆ ಸೂಚಿಸುತ್ತಿದ್ದಂತೆಯೇ ಅಮರಿಂದರ್ ಸಿಂಗ್ ಪಕ್ಷಕ್ಕೂ ರಾಜಿನಾಮೆ ಕೊಡುವ ಬೆದರಿಕೆ ಹಾಕಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿಯಲ್ಲಿ ತಿಳಿಸಿದೆ.
ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಮತ್ತು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನಡುವೆ ಶೀತಲ ಸಮರ ಮುಂದುವರಿದಿದ್ದು ಶಾಸಕರ ಒಂದು ಗುಂಪು ಮುಖ್ಯಮಂತ್ರಿಗಳ ರಾಜಿನಾಮೆಗೆ ಆಗ್ರಹಿಸುತ್ತಿದೆ.
ಪಂಜಾಬ್ ಪ್ರದೇಶ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸುನಿಲ್ ಜಖರ್ ಅವರಿಗೆ ಹೊಸ ನಾಯಕತ್ವದ ಜವಾಬ್ದಾರಿ ವಹಿಸಬಹುದು ಎಂದು ವಿಶ್ಲೇಷಣೆಗಳು ನಡೆಯುತ್ತಿವೆ.
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ರಾಜ್ಯ ವಿಕ್ಷಕರಾದ ಅಜಯ್ ಮಾಕನ್ ಮತ್ತು ಹರೀಶ್ ರಾವತ್ ಶಾಸಕರನ್ನು ಭೇಟಿ ಮಾಡಿ ಅಬಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.