ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರಾಜಿನಾಮೆ ನೀಡಿದ್ದಾರೆ. ರಾಜ್ಯಪಾಲರನ್ನು ಭೇಟಿಯಾದ ಅಮರಿಂದರ್ ಸಿಂಗ್ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ದೀರ್ಘಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಅಮರಿಂದರ್ ಸಿಂಗ್ ಪಕ್ಷ ತೊರೆಯುವ ಮುನ್ಸೂಚನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, 52 ವರ್ಷಗಳಿಂದ ರಾಜಕೀಯದಲ್ಲಿದ್ದ ನನಗೆ ಪಕ್ಷದಲ್ಲಿ ಅವಮಾನವಾಗಿದೆ ಎಂದು ನೋವು ತೋಡಿಕೊಂಡಿದ್ದಾರೆ.
ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ನನ್ನ ಬೆಂಬಲಿಗರೊಂದಿಗೆ ಮಾತನಾಡುತ್ತೇನೆ. ಆನಂತರವೇ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಇದೀಗ ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಹೈಕಮಾಂಡ್ ತೀರ್ಮಾನಕ್ಕೆ ಬಿಡಲಾಗಿದೆ.
ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎರಡು ನಿರ್ಣಯಗಳನ್ನು ಮಂಡಿಸಲಾಯಿತು. ನಿರ್ಗಮಿತ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರಿಗೆ ಕೃತಜ್ಞತೆ ಹೇಳಿದ್ದು ಮತ್ತು ಮುಂದಿನ ಸಿಎಲ್.ಪಿ ನಾಯಕನ ಆಯ್ಕೆ ಅಧಿಕಾರವನ್ನು ಹೈಕಮಾಂಡ್ ಬಿಡಲಾಗಿದೆ.