Friday, September 20, 2024
Google search engine
Homeಮುಖಪುಟನಿರುದ್ಯೋಗ ದಿನ ಆಚರಣೆ ಜೊತೆಗೆ ಮೋದಿಗೆ ಪದವಿ ಪ್ರಮಾಣ ಪತ್ರ ಹಿಂದಿರುಗಿಸಲು ಡಿ.ಕೆ.ಶಿವಕುಮಾರ್ ಕರೆ

ನಿರುದ್ಯೋಗ ದಿನ ಆಚರಣೆ ಜೊತೆಗೆ ಮೋದಿಗೆ ಪದವಿ ಪ್ರಮಾಣ ಪತ್ರ ಹಿಂದಿರುಗಿಸಲು ಡಿ.ಕೆ.ಶಿವಕುಮಾರ್ ಕರೆ

‘ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ನುಡಿದಂತೆ ನಡೆದುಕೊಳ್ಳಲು ವಿಫಲರಾಗಿದ್ದಾರೆ. ಹೀಗಾಗಿ ನಿರುದ್ಯೋಗ ದಿನ ಆಚರಣೆ ಜತೆಗೆ ನಿರುದ್ಯೋಗಿ ಯುವಕರು ತಮ್ಮ ಪದವಿ ಪ್ರಮಾಣ ಪತ್ರವನ್ನು ಮೋದಿ ಅವರಿಗೆ ಹಿಂದಿರುಗಿಸಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಕುಮಾರ್ ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಿಗಳು ನುಡಿದಂತೆ ನಡೆಯಬೇಕು. ಅದು ನಮ್ಮ ನೀತಿ ಹಾಗೂ ಧರ್ಮ. ನಾವು ಜನರ ಸೇವೆ ಮಾಡಲು ಬಂದಿದ್ದು, ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಇದನ್ನು ನಮ್ಮ ದೇಶ ಹಾಗೂ ನಾಡಿನ ಎಲ್ಲ ಧರ್ಮದಲ್ಲೂ ಬಸವಣ್ಣನವರ ಕಾಲದಿಂದಲೂ ನಾಯಕರು ಪ್ರತಿಪಾದಿಸಿಕೊಂಡು ಬಂದಿದ್ದಾರೆ ಎಂದು ಹೇಳಿದರು.

ಪ್ರಧಾನಿ ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಮಾತು ಕೊಟ್ಟಿದ್ದರು. 2 ಕೋಟಿ ಸರ್ಕಾರಿ ಉದ್ಯೋಗ ನೀಡಲು ಸಾಧ್ಯವಾಗದಿದ್ದರೂ ಕನಿಷ್ಟ ಖಾಸಗಿ ಉದ್ಯೋಗವಾದರೂ ಸೃಷ್ಟಿಯಾಗುವಂತೆ ಮಾಡಬೇಕಿತ್ತು. ಉದ್ಯೋಗ ಸೃಷ್ಟಿಗೆ ಅಗತ್ಯ ನೀತಿ ರೂಪಿಸಬೇಕಾಗಿತ್ತು ಎಂದು ತಿಳಿಸಿದರು.

‘ಕೋವಿಡ್ ಸಂದರ್ಭದಲ್ಲಿ ದೇಶದಲ್ಲಿ 2 ಕೋಟಿ ಉದ್ಯೋಗ ನಷ್ಟವಾಗಿದೆ. ಸರ್ಕಾರ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಜನ್ಮದಿನವನ್ನು ನಮ್ಮ ಯೂಥ್ ಕಾಂಗ್ರೆಸ್ ವತಿಯಿಂದ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.

‘ಕೇವಲ ನಿರುದ್ಯೋಗ ದಿನ ಆಚರಣೆ ಮಾಡುವುದಷ್ಟೇ ಅಲ್ಲ, ಎಲ್ಲ ನಿರುದ್ಯೋಗಿ ಯುವಕರು ತಮ್ಮ ಪದವಿ ಪ್ರಮಾಣ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದಿರುಗಿಸಬೇಕು ಎಂದು ಕರೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular