Friday, September 20, 2024
Google search engine
Homeಮುಖಪುಟಪಂಜಾಬ್ ಸಿಎಂ ಆಗಿ ಚೆನ್ನಿ ಪ್ರಮಾಣ ವಚನ ಸ್ವೀಕಾರ

ಪಂಜಾಬ್ ಸಿಎಂ ಆಗಿ ಚೆನ್ನಿ ಪ್ರಮಾಣ ವಚನ ಸ್ವೀಕಾರ

ಪಂಜಾಬ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಚರಣಜಿತ್ ಸಿಂಗ್ ಚೆನ್ನಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಚಂಡಿಗಡದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಚೆನ್ನಿ ಅವರಿಗೆ ರಾಜ್ಯಪಾಲರು ಪ್ರತಿಜ್ಞಾ ವಿಧಿ ಬೋಧಿಸಿದರು.

ಇದೇ ವೇಳೆ ದೇರಾಬಾಬ ನಾನಕ್ ಶಾಸಕ ಸುಖಜಿಂದರ್ ಸಿಂಗ್ ರಾಂಧವ ಮತ್ತು ಅಮೃತಸರ ಶಾಸಕ ಓಂ ಪ್ರಕಾಶ್ ಸೋನಿ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಗಳು ಇಬ್ಬರೂ ಪಂಜಾಬ್ ನ ಮಜಹ ವಲಯದವರಾಗಿದ್ದಾರೆ.

ಎಐಸಿಸಿ ನಾಯಕ ರಾಹುಲ್ ಗಾಂಧಿ ಮತ್ತು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಚೆನ್ನಿ ದಲಿತ ಸಿಖ್ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಚೆನ್ನಿ ಅವರು ಪಂಜಾಬ್ ಮುಖ್ಯಮಂತ್ರಿಯಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷ ಚರಣಜಿತ್ ಸಿಂಗ್ ಚೆನ್ನಿ ಅವರಿಗೆ ಸ್ವಾಗತ ಕೋರಿದೆ.

ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ, ದಲಿತ ಮುಖ್ಯಮಂತ್ರಿ ನೇಮಕ ಕೇವಲ ಚುನಾವಣೆ ಗಿಮಿಕ್. ಪಂಜಾಬ್ ನಲ್ಲಿ ವಿಧಾನಸಭಾ ಚುನಾವಣೆಗಳು ಇರುವುದರಿಂದ ಚೆನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ದಲಿತರ ಬಗ್ಗೆ ಕಾಳಜಿ ಮತ್ತು ವಿಶ್ವಾಸ ಇಲ್ಲ. ದಲಿತೇತರ ನಾಯಕತ್ವದಲ್ಲೇ ಕಾಂಗ್ರೆಸ್ ಚುನಾವಣೆಗೆ ಹೋಗಲಿದೆ ಎಂದು ಹೇಳಿದ್ದು, ಚೆನ್ನಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular