Thursday, September 19, 2024
Google search engine
Homeಮುಖಪುಟಉತ್ತರಪ್ರದೇಶ: ಹಿಂದೂ ಧಾರ್ಮಿಕ ಸಂತ ಮಹಂತ ನರೇಂದ್ರಗಿರಿ ಆತ್ಮಹತ್ಯೆ!

ಉತ್ತರಪ್ರದೇಶ: ಹಿಂದೂ ಧಾರ್ಮಿಕ ಸಂತ ಮಹಂತ ನರೇಂದ್ರಗಿರಿ ಆತ್ಮಹತ್ಯೆ!

ಅಖಿಲ ಭಾರತೀಯ ಅಖಾರ ಪರಿಷತ್ತಿನ ಮಹಂತ ನರೇಂದ್ರಗಿರಿ ಸ್ವಾಮೀಜಿ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಂತ ಅವರ ದೇಹ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಹಿಂದೂ ಸಾಧುಗಳ ಮುಖ್ಯಸ್ಥರಾಗಿದ್ದರು. ಹಲವು ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರು. ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಮಾನಸಿಕ ತೊಂದರೆಗೆ ಒಳಗಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಬರೆಯಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಅಖಿಲ ಭಾರತೀಯ ಅಖಾರ ಪರಿಷತ್ ಮಠದಿಂದ ಸಂಜೆ 5.30ಕ್ಕೆ ಕರೆ ಬಂತು. ನರೇಂದ್ರಗಿರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು ಎಂದು ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ತಿಳಿಸಿದೆ.

ಪೊಲೀಸರು ಮೇಲ್ನೋಟಕ್ಕೆ ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿದ್ದಾರೆ. ಮರಣೋತ್ತರ ವರದಿ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದ ನಂತರ ಸಾವಿನ ಕಾರಣಗಳು ತಿಳಿಯಲಿವೆ ಎಂದು ಮೂಲಗಳು ತಿಳಿಸಿವೆ.

ನರೇಂದ್ರಗಿರಿ ಸ್ವಾಮಿ ನಿಧನಕ್ಕೆ ಉತ್ತರಪ್ರದೇಶದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಂತಾಪ ವ್ಯಕ್ತಪಡಿಸಿದ್ದು ಗಿರಿ ಸಾವು ತುಂಬಲಾರದ ನಷ್ಟ ಎಂದು ಹೇಳಿದ್ದಾರೆ.

ಹಲವು ಮಂದಿ ರಾಜಕೀಯ ನಾಯಕರು ನರೇಂದ್ರಗಿರಿ ಸ್ವಾಮೀಜಿ ಸಾವಿಗೆ ಸಂತಾಪ ಸೂಚಿಸಿದ್ದು ಆಧ್ಯಾತ್ಮಿಕ ಜಗತ್ತಿಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಆದಿತ್ಯನಾಥ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular