Friday, October 18, 2024
Google search engine
Homeಮುಖಪುಟಬೆಲೆ ಏರಿಕೆ ನಿಯಂತ್ರಿಸದೆ ಕೇಂದ್ರದಿಂದ ಸುಳ್ಳು ಲೆಕ್ಕ -ಸಿದ್ದರಾಮಯ್ಯ ಟೀಕೆ

ಬೆಲೆ ಏರಿಕೆ ನಿಯಂತ್ರಿಸದೆ ಕೇಂದ್ರದಿಂದ ಸುಳ್ಳು ಲೆಕ್ಕ -ಸಿದ್ದರಾಮಯ್ಯ ಟೀಕೆ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬೆಲೆ ನಿಯಂತ್ರಣ ಮಾಡಲಾಗದೆ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಸುಳ್ಳು ಲೆಕ್ಕದ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ಕೂಡ ಮೋದಿಯವರ ಸುಳ್ಳುಗಳನ್ನೇ ಇಲ್ಲಿ ಬಾಯಿಪಾಠ ಒಪ್ಪಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲ 120 ಡಾಲರ್ ಗಿಂತ ಹೆಚ್ಚಿದ್ದರೂ ದೇಶದಲ್ಲಿ ಡೀಸೆಲ್ ಬೆಲೆ 47 ರೂ, ಪೆಟ್ರೊಲ್ ಬೆಲೆ 75 ರೂ ಗಡಿಯೊಳಗೆ ಇತ್ತು. ಹಾಗಾಗಿ ಅಗತ್ಯವಸ್ತುಗಳ ಬೆಲೆ ಕಡಿಮೆ ಇತ್ತು ಎಂದು ಹೇಳಿದ್ದಾರೆ.

2014ರಿಂದ ಈವರೆಗೆ ಕಚ್ಚಾತೈಲ ಬೆಲೆ ಸುಮಾರು 50 ಡಾಲರ್ ಆಸುಪಾಸಿನಲ್ಲಿದ್ದರೂ ಅದರ ಲಾಭ ಗ್ರಾಹಕರಿಗೆ ಸಿಗಲಿಲ್ಲಿ. ಕೇಂದ್ರ ಸರ್ಕಾರ ಅಬಕಾರಿ ಸುಂಕ ಏರಿಕೆ ಮಾಡಿದ ಕಾರಣ ಪೆಟ್ರೋಲಿಯಂ ಉತ್ಪನ್ನಗಳ ಜೊತೆ ಅಗತ್ಯವಸ್ತುಗಳ ಬೆಲೆಯೂ ಏರಿಕೆ ಆಗಿದೆ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಡಿಸೆಲ್ ಮತ್ತು ಪೆಟ್ರೋಲ್ ಮೇಲಿನ ಅಬಕಾರಿ ಸುಂಕದ ಮೂಲಕ 23 ಲಕ್ಷ ಕೋಟಿ ರೂ ಸಂಗ್ರಹಿಸಿದೆ. 2020-21ರಲ್ಲಿ ಸಂಗ್ರಹಿಸಿದ ಅಬಕಾರಿ ಸುಂಕ 3.35ಲಕ್ಷ ಕೋಟಿ. ಕಳೆದ ಏಳು ವರ್ಷಗಳಲ್ಲಿ ಕರ್ನಾಟಕದಿಂದ 1.20ಸಾವಿರ ಕೋಟಿ ತೆರಿಗೆ ಸಂಗ್ರಹವಾಗಿದೆ ಎಂದು ಅಂಕಿಅಂಶಗಳ ಮೂಲಕ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯಲ್ಲಿ 3 ರೂ ಕಡಿಮೆ ಮಾಡಿದ್ದಾರೆ. ನಮ್ಮ ರಾಜ್ಯ ಸರ್ಕಾರ ಯಾಕೆ ತೆರಿಗೆ ಕಡಿತಗೊಳಿಸಬಾರದು. ಆಗ ಪೆಟ್ರೋಲ್ ಡೀಸೆಲ್ ಬೆಲೆ ಇಳಿಯುವ ಜೊತೆಗೆ ಅಗತ್ಯ ವಸ್ತುಗಳ ಬೆಲೆಯೂ ಇಳಿಯುತ್ತದೆ ಎಂದು ಸಲಹೆ ಮಾಡಿದ್ದಾರೆ.

ಜಿ.ಎಸ್.ಟಿ. ಬಂದ ಮೇಲೆ ರಾಜ್ಯಗಳಿಗಿದ್ದ ತೆರಿಗೆ ಸಂಗ್ರಹದ ಅವಕಾಶ ಇಲ್ಲದಂತೆ ಆಗಿ ಆದಾಯ ಇಳಿಮುಖವಾಗಿದೆ. ಈ ಕೊರತೆ ನೀಗಿಸಲು ಕೇಂದ್ರ ಸರ್ಕಾರ ಜಿಎಸ್.ಟಿ. ಪರಿಹಾರವನ್ನು ನೀಡಬೇಕಾಗಿದೆ. ನರೇಂದ್ರ ಮೋದಿ ಸರ್ಕಾರ ಈ ಪರಿಹಾವನ್ನೂ ನೀಡದೆ ನೀವೇ ಸಾಲ ತಗೊಳ್ಳಿ ಎಂದು ಹೇಳುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಘಿದೆ. ರಾಜ್ಯದ ಪಾಲನ್ನು 4.71% ರಿಂದ 3.64% ಇಳಿಸಲಾಗಿದೆ. ಹಿಂದೆ ರಾಜ್ಯದ ಪಾಲು, ವಿಶೇಷ ಅನುದಾನ ಸೇರಿ 80 ಸಾವಿರ ಕೋಟಿ ರೂಪಾಯಿ ರಾಜ್ಯಕ್ಕೆ ಬರುತ್ತಿತ್ತ. ಆದರೆ ಈಗ 38 ಸಾವಿರ ಕೋಟಿ ಮಾತ್ರ ಬರುತ್ತಿದೆ. ಇದಕ್ಕೆ ಯಾರು ಹೊಣೆ ಎಂದು ಕೇಳಿದ್ದಾರೆ.

15ನೇ ಹಣಕಾಸು ಆಯೋಗ ರಾಜ್ಯಕ್ಕೆ ಶಿಫಾರಸು ಮಾಡಿದ 5,495 ಕೋಟಿ ವಿಶೇಷ ಅನುದಾನವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರಸ್ಕರಿಸಿದರು ಇದನ್ನು ಕೇಳುವ ಧೈರ್ಯ ಈ ಪುಕ್ಕಲು ಸರ್ಕಾರಕ್ಕೆ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೆಟ್ರೊಲ್ ಬೆಲೆ ಕಡಿಮೆ ಮಾಡುತ್ತಾರೆ ಎಂಬ ನಿರೀಕ್ಷೆ ಇಲ್ಲ ಎಂದು ಹೇಳಿದ್ದಾರೆ.

ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಗೋಳನ್ನಾಗಲೀ ವಿರೋಧ ಪಕ್ಷಗಳ ಹೋರಾಟವನ್ನಾಗಲೀ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಣನೆಗೆ ತೆಗೆದುಕೊಳ್ಳದಷ್ಟು ಭಂಡತನವನ್ನು ಬೆಳೆಸಿಕೊಂಡಿವೆ ಎಂದು ಕುಟುಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular