Friday, October 18, 2024
Google search engine
Homeಮುಖಪುಟಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಅಕೌಂಟ್ ಹ್ಯಾಕ್

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಅಕೌಂಟ್ ಹ್ಯಾಕ್

ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಅಪರಿತನೊಬ್ಬ ವಿದೇಶಿ ಸ್ಥಳದಿಂದ ಹ್ಯಾಕ್ ಮಾಡಿದ್ದಾನೆ. ಈ ಕುರಿತು ಸ್ವತಃ ಸಚಿವರೇ ಹೇಳಿಕೆ ಬಿಡುಗಡೆ ಮಾಡಿದ್ದು ‘ನನ್ನ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ಆರೋಪಿ ಯಾವ ಸ್ಥಳದಿಂದ ನನ್ನ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಿದ್ದಾನೆಂಬ ಬಗ್ಗೆ ಖಚಿತ ಮಾಹಿತಿ ಇಲ್ಲ. ಆರೋಪಿಯ ಗುರುತು ಗೊತ್ತಿಲ್ಲ ಎಂಬ ಹೇಳಿಕೆಯನ್ನು ಉಲ್ಲೇಖಿಸಿ ಡೆಕ್ಕನ್ ಕ್ರಾನಿಕಲ್ ವರದಿ ಮಾಡಿದೆ.

ಹ್ಯಾಕರ್ ಕಳಿಸುವ ಯಾವುದೇ ಮಾಹಿತಿಗಳ ಜಾಲಕ್ಕೆ ಬೀಳಬೇಡಿ. ನನ್ನ ಖಾತೆಯಿಂದ ಅಸಂಸದೀಯ ಮತ್ತು ಅವಹೇಳನಕಾರಿ ಹೇಳಿಕೆಗಳು ಬಂದರೆ ಅವುಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಟ್ವಿಟ್ಟರ್ ಖಾತೆ ಹ್ಯಾಕ್ ಮಾಡಿರುವ ಬಗ್ಗೆ ಟ್ವಿಟ್ಟರ್ ಗೆ ದೂರು ನೀಡಿದ್ದೇನೆ. ಈ ಬಗ್ಗೆ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸರಿಗೂ ದೂರು ಕೊಡುವ ಬಗ್ಗೆ ಚಿಂತಿಸಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಮುರುಗೇಶ್ ನಿರಾಣಿ ಅವರ ಹೆಸರಿನ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಒತ್ತಾಯಿಸಿದ್ದರು. ಈ ಕುರಿತು ನಿರಾಣಿ ಅವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

“ಸ್ನೇಹಿತರೇ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನನ್ನ ಹೆಸರು ದುರ್ಬಳಕೆ ಮಾಡಿಕೊಂಡು ನಾನು ಹಣ ಸಹಾಯ ಕೇಳು್ತಿದ್ದೇನೆಂದು ಸುಳ್ಳು ವದಂತಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಸಂಪೂರ್ಣವಾಗಿ ಸತ್ಯಕ್ಕೆ ದೂರವಾದ ಮಾತು. ದಯವಿಟ್ಟು ಯಾರೊಬ್ಬರೂ ಇಂತಹ ವಂಚನೆಗೆ ಒಳಗಾಗಬೇಡಿ. ಈ ಬಗ್ಗೆ ನಾನು ಸೈಬರ್ ಕ್ರೈಮ್ ಗೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದೇನೆ” ಎಂದು ಹೇಳಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular