Friday, October 18, 2024
Google search engine
Homeಮುಖಪುಟಬಿಜೆಪಿ ಸುಳ್ಳಿನ ಕಾರ್ಖಾನೆ - ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಸುಳ್ಳಿನ ಕಾರ್ಖಾನೆ – ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಸುಳ್ಳಿನ ಕಾರ್ಖಾನೆ ಇದ್ದಂತೆ. ಸುಳ್ಳಿನ ಕಂತೆಗಳನ್ನು ಸೃಷ್ಟಿ ಮಾಡಿ ಮುಗ್ಧ ಜನರ ತಲೆಗೆ ತುಂಬುತ್ತಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ ಅವರು “ಪ್ರಧಾನಿ ನರೇಂದ್ರ ಮೋದಿ ಸಬ್ ಕ ಸಾಥ್, ಸಬ್ ಕ ವಿಕಾಸ್ ಎನ್ನುತ್ತಾರೆ. ಆದರೆ ಮಂತ್ರಿಮಂಡಲದಲ್ಲಿ ಒಬ್ಬನೇ ಒಬ್ಬ ಕ್ರಿಶ್ಚಿಯನ್, ಮುಸ್ಲೀಂ ಸಚಿವರಿಗೆ ಅವಕಾಶ ನೀಡಿಲ್ಲ ಎಂದು ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ, ಬಡವರಿಗೆ ಉಚಿತವಾಗಿ ತಲಾ 7 ಕೆ.ಜಿ. ಅಕ್ಕಿ ನೀಡಿದ್ದು ನಮ್ಮ ಸರ್ಕಾರ. ಈ ಯೋಜನೆಯನ್ನು ಮುಂದುವರಿಸಿಕೊಂಡು ಹೋಗಲು ಬಿಜೆಪಿ ಸರ್ಕಾರಕ್ಕೆ ಮನಸ್ಸಿಲ್ಲ. ತಿನ್ನುವ ಅನ್ನದಲ್ಲೂ ರಾಜಕೀಯ ಮಾಡುತ್ತಾರೆ. ಮುಂದೆ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಬಡವರಿಗೆ ಉಚಿತವಾಗಿ ಹತ್ತು ಕೆ.ಜಿ. ಅಕ್ಕಿ ನೀಡುತ್ತೇವೆ ಎಂದು ಭರವಸೆ ನೀಡಿದರು.

ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು. ಅವರಲ್ಲಿ ಸ್ವಂತ ಶಕ್ತಿ ಇಲ್ಲ. ಹಣ ಅಧಿಕಾರದ ಾಮಿಷವೊಡ್ಡಿ ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ರೂ ಯಡಿಯೂರಪ್ಪ ಅವರನ್ನೇ ಕಿತ್ತು ಬಿಸಾಕಿದ್ರು. ಇದಕ್ಕೇ ಹೇಳೋದು ಮಾಡಿದ್ದುಣ್ಣೋ ಮಹರಾಯ ಎಂದು ಲೇವಡಿ ಮಾಡಿದ್ದಾರೆ.

ಆರ್.ಎಸ್.ಎಸ್. ತಮ್ಮನ್ನು ತಾವು ದೇಶಭಕ್ತರು ಅಂತ ಕರೆದುಕೊಳ್ಳುತ್ತಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟ ಒಬ್ಬನೇ ಒಬ್ಬ ಆರ್.ಎಸ್.ಎಸ್. ನಾಯಕನ ಹೆಸರನ್ನು ಬಿಜೆಪಿ ನಾಯಕರು ಹೇಳಲಿ ನೋಡೋಣ. ಇಷ್ಟೇ ಅವರ ದೇಶಭಕ್ತಿ ಎಂದು ಸವಾಲು ಹಾಕಿದರು.

ಮಹಾತ್ಮಗಾಂಧಿ, ಬಿ.ಆರ್.ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಕಂಡರೆ ಬಿಜೆಪಿಗೆ ಆಗ್ತಾ ಇರಲಿಲ್ಲ. ಅವರ ಭಾವಚಿತ್ರವನ್ನೂ ತಮ್ಮ ಕಚೇರಿಗಳಲ್ಲಿ ಹಾಕುತ್ತಿರಲಿಲ್ಲ. ಈಗ ಇದ್ದಕ್ಕಿದ್ದಂತೆ ಅವರನ್ನು ಪ್ರೀತಿಸುವ ಹಾಗೆ ನಾಟಕವಾಡಲು ಪ್ರಾರಂಭಿಸಿದ್ದಾರೆ ಎಂದು ಟೀಕಿಸಿದರು.

ಈ ದೇಸದಲ್ಲಿ ಪ್ರತಿಯೊಬ್ಬರಿಗೂ ಎಲ್ಲಿಯವರೆಗೆ ಮೈತುಂಬ ಬಟ್ಟೆ ಮತ್ತು ಹೊಟ್ಟೆತುಂಬ ಅನ್ನ ತಿನ್ನುವುದಿಲ್ಲವೋ ಅಲ್ಲಿಯವರೆಗೆ ನಾನು ಅರೆಬೆತ್ತಲಾಗಿಯೇ ಇರುತ್ತೇನೆ ಎಂದು ಗಾಂಧೀಜಿ ಅವರು ಹೇಳಿದ್ದರು. ನಾವು ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಅನ್ನು ಬಂದ್ ಮಾಡಿ ಬಿಜೆಪಿ ಸರ್ಕಾರ ಬಡವರು ತಿನ್ನುವ ಅನ್ನಕ್ಕೆ ಕಲ್ಲು ಹಾಕಿದೆ ಎಂದು ಆರೋಪಿಸಿದರು.

ಗಾಂಧೀಜಿಯವರನ್ನು ಗೌರವಿಸುವುದು ಎಂದರೆ ಅವರ ಭಾವಚಿತ್ರಕ್ಕೆ ಪೂಜೆ ಮಾಡುವುದಲ್ಲ. ಅವರ ಚಿಂತನೆಗಳ ಪಾಲನೆ ಹಾಗೂ ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡಲು ಶ್ರಮಿಸುವುದು ಎಂಬುದನ್ನು ಬಿಜೆಪಿ ಮುಖಂಡರು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular