Friday, November 22, 2024
Google search engine
Homeಮುಖಪುಟಉಪಚುನಾವಣೆಗೆ ಸಿದ್ಧ - ಡಿ.ಕೆ.ಶಿವಕುಮಾರ್

ಉಪಚುನಾವಣೆಗೆ ಸಿದ್ಧ – ಡಿ.ಕೆ.ಶಿವಕುಮಾರ್

ವಿಧಾನಸಭೆ ಉಪಚುನಾವಣೆಗೆ ಈಗಾಗಲೇ ಒಂದು ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಪ್ರಕಟಿಸಿದ್ದು ಇನ್ನೊಂದು ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಶೀಘ್ರವೇ ಹೈಕಮಾಂಡ್ ಪ್ರಕಟಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಯಡಿಯೂರಪ್ಪ ಮತ್ತು ಬಿಜೆಪಿ ಅಧ್ಯಕ್ಷರ ಹೇಳಿಕೆಯನ್ನು ಗಮನಿಸಿದ್ದೇನೆ. ನಮ್ಮ ಪಕ್ಷದಿಂದ 20 ಶಾಸಕರು ಬಿಜೆಪಿ ಸೇರುತ್ತಾರೆ ಎಂದು ಹೇಳಿದ್ದಾರೆ. ನಮ್ಮ ಶಾಸಕರನ್ನು ಸೇರಿಸಿಕೊಳ್ಳಲು ಯಾಕೆ ವಿಳಂಬ ಮಾಡುತ್ತಿದ್ದಾರೋ ಗೊತ್ತಿಲ್ಲ. ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಲಿ. ರಾಜಕಾರಣದಲ್ಲಿ ಗುಟ್ಟಿನ ರಾಜಕಾರಣ ಎಲ್ಲರೂ ಮಾಡುತ್ತಾರೆ ಎಂದು ಹೇಳಿದರು.

ಸದ್ಯಕ್ಕೆ ನಾವು ಅಪರೇಷನ್ ಹಸ್ತದ ವಿಚಾರವಾಗಿ ಯೋಚನೆ ಮಾಡಿಲ್ಲ. ಬಿಜೆಪಿ ನಮ್ಮ ಶಾಸಕರನ್ನು ಸೇರಿಕೊಳ್ಳುವುದಿದ್ದರೆ ಸೇರಿಸಿಕೊಳ್ಳಲಿ. ನನ್ನ ಮತ್ತು ಸಿದ್ದರಾಮಯ್ಯ ಅವರನ್ನು ಪರಿಗಣಿಸಿದ್ದಾರೋ ಇಲ್ಲವೋ ಗೊತ್ತಿಲ್ಲ. ಇದೆಲ್ಲವೂ ಮುಗಿಯಲಿ. ಅವರು ಸಿನಿಮಾ ಶೈಲಿಯಲ್ಲಿ ನಂಬರ್ ಹೇಳುತ್ತಾರೆ. ಅವರಿಗೂ ನಮಗೂ ವ್ಯತ್ಯಾಸ ಇರಬೇಕಲ್ಲವೇ. ನಾನು ನಂಬರ್ ಬಗ್ಗೆ ಮಾತನಾಡುವುದಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.

ಪಕ್ಷದ ಸಿದ್ದಾಂತ, ನಾಯಕತ್ವದಲ್ಲಿ ನಂಬಿಕೆ ಇರುವವರಲ್ಲರೂ ಪಕ್ಷ ಸೇರಲು ಅರ್ಜಿ ಹಾಕಬೆಕು. ಸಮಿತಿ ಅದನ್ನುಪರಿಶೀಲಿಸುತ್ತದೆ. ಯಾರೇ ಪಕ್ಷಕ್ಕೆ ಬಂದರೂ ಬೇಷರತ್ತಾಗಿ ಬೆಂಬಲ ನೀಡಬೇಕು ಎಂದು ಸ್ಪಷ್ಟಪಡಿಸಿದರು.

ನಾನು ಎಲ್ಲ ಶಾಸಕರ ಜೊತೆ ಮಾತನಾಡುತ್ತೇನೆ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ. ಜೆಡಿಎಸ್ ನಿಂದ ಬರುವವರ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಅದನ್ನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಜೆಡಿಎಸ್ ಅವರದ್ದು ಮಿಷನ್ 123. ಬಿಜೆಪಿಯದ್ದು ಮಿಷನ್ 150 ಆದರೆ ನಮ್ಮದು ಮಿಷನ್ 224 ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular