Friday, September 20, 2024
Google search engine
Homeಮುಖಪುಟಪ್ರಿಯಾಂಕಗಾಂಧಿ ಬಂಧನ ಕಾನೂನುಬಾಹಿರ - ನ್ಯಾಯಾಂಗ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪ್ರಿಯಾಂಕಗಾಂಧಿ ಬಂಧನ ಕಾನೂನುಬಾಹಿರ – ನ್ಯಾಯಾಂಗ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ರೈತರ ವಿರುದ್ದ ಪ್ರಚೋದನೆ ನಡೆಸುವವರನ್ನು ಬಿಟ್ಟು ಹತ್ಯೆಯಾದ ರೈತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಹೋದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿರುವುದು ಕಾನೂನುಬಾಹಿರವಾಗಿದ್ದು ಕೂಡಲೇ ಬಿಡುಗಡೆ ಮಾಡಬೇಕು ಎಂದು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಎಂ. ಮಲ್ಲಿಕಾರ್ಜುನಖರ್ಗೆ ಒತ್ತಾಯಿಸಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಪೊಲೀಸರು ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿ 40 ಗಂಟೆ ಕಳೆದರೂ ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ. ಇದು ಕಾನೂನುಬಾಹಿರ ಮತ್ತು ಸಂವಿಧಾನಬಾಹಿರ ನಡೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ಹರ್ಯಾಣ ಮುಖ್ಯಮಂತ್ರಿ ಖಟ್ಟರ್ ಮತ್ತು ಕೇಂದ್ರ ಗೃಹಖಾತೆ ರಾಜ್ಯ ಸಚಿವ ಮಿಶ್ರಾ ರೈತರ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿದರು. ಪರಿಣಾಮ ಗೃಹಖಾತೆ ರಾಜ್ಯ ಸಚಿವರ ಪುತ್ರ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹತ್ತಿಸಿ 6ಮಂದಿಯನ್ನು ಹತ್ಯೆ ಮಾಡಿದ್ದಾರೆ. ರೈತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದರು.

ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮದನ್ ಲೋಕೂರ್, ಪ್ರಿಯಾಂಕ ಗಾಂಧಿ ಬಂಧನ ಸಂವಿಧಾನಬಾಹಿರ ಎಂದು ಹೇಳಿದ್ದಾರೆ. ಪ್ರಚೋದನೆ ನೀಡುವವರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಖರ್ಗೆ ಒತ್ತಾಯಿಸಿದರು

ಸಚಿವರ ಪುತ್ರ ವಾಹನದ ಎಡಭಾಗದಲ್ಲಿ ಕುಳಿತು ರೈತರ ಹತ್ಯೆಯ ನಂತರ ಅಲ್ಲಿಂದ ಓಡಿಹೋಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಆದರೂ ತಮ್ಮ ಪುತ್ರ ರೈತರ ಮೇಲೆ ವಾಹನ ಹರಿಸಿಲ್ಲ ಎಂದು ಸಚಿವರು ಹೇಳುತ್ತಾರೆ. ಇದನ್ನು ನೋಡಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ರೈತರ ಬಗೆಗೆ ಕಾಳಜಿ ಇಲ್ಲ ಎಂಬುದು ತಿಳಿಯುತ್ತದೆ ಎಂದು ಟೀಕಿಸಿದರು.

ಈ ಘಟನೆಯಲ್ಲಿ ಹತ್ಯೆಯಾದ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ಹೋದ ಪ್ರಿಯಾಂಕ ಗಾಂಧಿ ಅವರನ್ನು ಯಾವುದೇ ಮಾಹಿತಿ ನೀಡದೆ ಬಂಧಿಸಿರುವುದು ಖಂಡನೀಯ. ಬಂಧನದ ವೇಳೆ ಅನುಸರಿಸಬೇಕಿದ್ದ ಪ್ರಕ್ರಿಯೆಗಳನ್ನು ಗಾಳಿಗೆ ತೂರಿದ್ದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಇಡೀ ಘಟನೆಯನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ರೈತರನ್ನು ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಬೇಕು. ಕೇಂದ್ರ ಗೃಹಖಾತೆ ರಾಜ್ಯ ಸಚಿವ ಮಿಶ್ರಾ ಸುಳ್ಳು ಹೇಳುತ್ತಿದ್ದು ಸಚಿವರಾಗಲು ಅವರು ನಾಲಾಯಕ್ ಆಗಿದ್ದಾರೆ. ಹಾಗಾಗಿ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಪ್ರಚೋದನೆ ನೀಡುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಪ್ರಿಯಾಂಕಗಾಂಧಿ ಮಾಡಿದ ಅಪರಾಧ ಏನು? ಬಂಧಿಸಿದ್ದು ಯಾಕೆ? ಇದಕ್ಕೆ ಉತ್ತರ ಕೊಡಬೇಕು. ತಪ್ಪು ಮಾಡಿದವರನ್ನು ಶಿಕ್ಷೆಗೆ ಗುರಿಮಾಡಬೇಕು. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಸಾಧುಬಟ್ಟೆ ಧರಿಸಿದ್ದರೂ ಕೆಟ್ಟ ವ್ಯವಸ್ಥೆಗೆ ಬೆಂಬಲ ನೀಡುತ್ತಿದ್ದಾರೆ. ದಬ್ಬಾಳಿಕೆ, ದೌರ್ಜನ್ಯಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ. ಎಲ್ಲರೂ ಇದರ ವಿರುದ್ಧ ನಿಲ್ಲಬೇಕು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular