Thursday, September 19, 2024
Google search engine
Homeಮುಖಪುಟಲಖಿಂಪುರಖೇರಿ ಪ್ರಕರಣ-ಆರೋಪಿಗಳ ಬಂಧನಕ್ಕೆ ಟಿಕಾಯಿತ್ ಆಗ್ರಹ

ಲಖಿಂಪುರಖೇರಿ ಪ್ರಕರಣ-ಆರೋಪಿಗಳ ಬಂಧನಕ್ಕೆ ಟಿಕಾಯಿತ್ ಆಗ್ರಹ

ಲಖಿಂಪುರಖೇರಿ ರೈತರ ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು. ಈ ಘಟನೆಗೆ ಕಾರಣರಾದ ಗೃಹಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಕೂಡಲೇ ರಾಜಿನಾಮೆ ನೀಡಬೇಕು ಎಂದು ಭಾರತ್ ಕಿಸಾನ್ ಒಕ್ಕೂಟದ ಅಧ್ಯಕ್ಷ ರಾಕೇಶ್ ಟಿಕಾಯತ್ ಆಗ್ರಹಿಸಿದ್ದಾರೆ.

ಒಂದು ವಾರದೊಳಗೆ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ದೇಶಾದ್ಯಂತ ಪ್ರತಿಭಟನೆ ಆರಂಬಿಸುವುದಾಗಿ ಸರ್ಕಾರಗಳಿಗೆ ಎಚ್ಚರಿಕೆ ನೀಡಿದ್ದಾರೆ. ರೈತರ ಮೇಲೆ ವಾಹನ ಹರಿಸಲು ಪ್ರಚೋದನೆ ನೀಡಿದ ಆರೋಪ ಮೇಲೆ ಮಿಶ್ರಾ ಅವರನ್ನು ಸಂಪುಟದಿಂದ ತೆಗೆದು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಅಕ್ಟೋಬರ್ 4ರಂದು ರೈತರೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನು ಸರ್ಕಾರ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ದೇಶಾದ್ಯಂತ ಪ್ರತಿಭಟನೆ ಆರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅಕ್ಟೋಬರ್ 4ರಂದು ರೈತರು ಮತ್ತು ಪ್ರಾಧಿಕಾರದೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಆಧಾರದ ಮೇಲೆ ಪ್ರತಿಭಟನೆ ಕೈಬಿಡಲಾಗಿದೆ. ಮೃತ ರೈತ ಕುಟುಂಬಗಳಿಗೆ 45 ಲಕ್ಷ ರೂಪಾಯಿ ಪರಿಹಾರ ನೀಡುವ ಭರವಸೆ ನೀಡಲಾಗಿತ್ತು. ಈಗ ಇಬ್ಬರು ಮೃತ ರೈತರ ಕುಟುಂಬಗಳಿಗೆ ತಲಾ 45 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ.

ಮತ್ತೊಂದು ಕಡೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಲಖಿಂಪುರಖೇರಿ ರೈತರ ಹತ್ಯೆ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular