Saturday, October 19, 2024
Google search engine
Homeಮುಖಪುಟರೈಲಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ-ನಾಲ್ವರ ಬಂಧನ

ರೈಲಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ-ನಾಲ್ವರ ಬಂಧನ

ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ 20 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಪ್ರಯಾಣಿಕರಿಂದ ಕಳವು ಮಾಡಿದ್ದ ಸಾವಿರಾರು ರೂಪಾಯಿ ಮೌಲ್ಯದ ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಹಾರಾಷ್ಟ್ರ ಕೇಂದ್ರ ರೈಲ್ವೆ ಮಾರ್ಗದ ಇಗತ್ ಪುರಿ ಮತ್ತು ಕಸರ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ತಡರಾತ್ರಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಕೂಡಲೇ ಸಹಾಯಕ್ಕಾಗಿ ಕೂಗಿಕೊಂಡಾಗ ಮುಂಬೈ ಸರ್ಕಾರಿ ರೈಲ್ವೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮುಂಬೈ ಜಿಆರ್.ಪಿ ಪೊಲೀಸ್ ಕಮೀಷನರ್ ಕೈಸರ್ ಖಾಲಿದ್ “ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲು ಘಾಟ್ ವಲಯ ದಲ್ಲಿ ಬರುತ್ತಿದ್ದಾಗ ರೈಲಿನ ಸ್ಲೀಪರ್ ಬೋಗಿ ಡಿ-2ರಲ್ಲಿ ಈ ಘಟನೆ ಜರುಗಿದೆ. ಕಸರದಲ್ಲಿ ಪ್ರಯಾಣಿಕರು ಕೂಗಿಕೊಂಡರು. ತಕ್ಷಣವೇ ಪೊಲೀಸರು ಸ್ಪಂದಿಸಿದರೆಂದು ಮೂಲಗಳು ತಿಳಿಸಿವೆ.

ಸಂತ್ರಸ್ತೆ 20 ವರ್ಷದ ಮಹಿಳೆಯಾಗಿದ್ದ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆ ನಡೆಸಿದ ವೈದ್ಯೆ ಮಹಿಳೆ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ. ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಆರೋಪಿಗಳನ್ನು ಪ್ರಶ್ನಿಸುವ ಜೊತೆಗೆ ಹಿಂದಿನ ದಾಖಲೆಗಳನ್ನು ಪರಿಶೀಲಿಸಲಾಯಿತು ಎಂದು ಪೊಲೀಸರು ತಿಳಿಸಿದರು.

ಅಪರಾಧ ವಿಭಾಗದ ಡಿಸಿಪಿ ಖಾಲಿದ್ ಆರೋಪಿಗಳ ವಿರುದ್ದ ಭಾರತ ದಂಡ ಸಂಹಿತೆ ಸೆಕ್ಷನ್ 395, 397, 376(ಡಿ) ಎ54 ಮತ್ತು 354(ಬಿ) ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಯಾಣಿಕರಿಂದ ದರೋಡೆ ಮಾಡಿದ್ದ 96,390 ರೂಪಾಯಿ ಮೌಲ್ಯದ ಮೊಬೈಲ್ ಗಳು ಮತ್ತು ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular