Monday, September 16, 2024
Google search engine
Homeಚಳುವಳಿಕಾಂಗ್ರೆಸ್ ಅಧಿಕಾರಕ್ಕೆ ಬಂದ ತಿಂಗಳಲ್ಲೇ ಮೈಸುಗರ್ ಕಾರ್ಖಾನೆ ಪುನರ್ ಆರಂಭ - ಸಿದ್ದರಾಮಯ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಿಂಗಳಲ್ಲೇ ಮೈಸುಗರ್ ಕಾರ್ಖಾನೆ ಪುನರ್ ಆರಂಭ – ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಮೈಶುಗರ್ ಕಾರ್ಖಾನೆಯ ಪುನಶ್ಚೇತನಕ್ಕೆ ಅಗತ್ಯವಿರುವ ಅನುದಾನ ನೀಡುವಂತೆ ಮಾತನಾಡುತ್ತೇನೆ. ಒಂದು ವೇಳೆ ಅವರು ಈ ಕೆಲಸ ಮಾಡದಿದ್ದರೆ ಮತ್ತೆ ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗಾಗಿ ಕಾರ್ಖಾನೆಯನ್ನು ಪುನರ್ ಆರಂಭಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭರವಸೆ ನೀಡಿದರು.

ಮೈಸೂರು ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆಗೆ ನೀಡದಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರೈತ ಹಿತರಕ್ಷಣಾ ಸಮಿತಿ ಸದಸ್ಯರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದರಾಮಯ್ಯ “ಕರ್ನಾಟಕದ 65 ಸಕ್ಕರೆ ಕಾರ್ಖಾನೆಗಳ ಪೈಕಿ ಮೈಸುಗರ್ ಮಾತ್ರ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಯಾಗಿದೆ. ಆದ್ದರಿಂದ ಈ ಕಾರ್ಖಾನೆಯನ್ನು ಸರ್ಕಾರ ಉಳಿಸಿಕೊಳ್ಳಬೇಕು ಮತ್ತು ನಿರ್ವಹಿಸಬೇಕು ಎಂದು ಒತ್ತಾಯಿಸಿದರು.

ಮೈಸುಗರ್ ಸಕ್ಕರೆ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣಗೊಳಿಸಬಾರದು. ಮೈಸುಗರ್ ಕಾರ್ಖಾನೆ ಹಲವು ವರ್ಷಗಳ ಕಾಲ ಲಾಭದಲ್ಲೇ ಇತ್ತು. ಈಗ ನಷ್ಟಕ್ಕೆ ಸಿಲುಕಿದೆ. ಈ ನಷ್ಟಕ್ಕೆ ಸರ್ಕಾರ ಹೊಣೆಯೇ ಹೊರತು ರೈತರಲ್ಲ ಎಂದು ಹೇಳಿದರು.

ಸರ್ಕಾರದ ಹಲವು ಕಾರ್ಖಾನೆಗಳು, ಸಂಸ್ಥೆಗಳು ನಷ್ಟದಲ್ಲಿವೆ. ಅವುಗಳನೆಲ್ಲಾ ಮಾರಾಟ ಮಾಡೋಕಾಗುತ್ತಾ? ನಷ್ಟಕ್ಕೆ ಕಾರಣ ಗಳನ್ನು ಪತ್ತೆಹಚ್ಚಿ ಪುನರುಜ್ಜೀವನಗೊಳಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮೈಸುಗರ್ ಕಾರ್ಖಾನೆ ಬಗ್ಗೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ನಷ್ಟಕ್ಕೆ ಕಾರಣಗಳೇನು ಎನ್ನುವುದನ್ನು ವಿವರಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುವಂತೆ ಒತ್ತಾಯಿಸಿದ್ದೇನೆ. ಮಂಡ್ಯದ ಖಾಸಗಿ ಸಕ್ಕರೆ ಕಾರ್ಖಾನೆಗಳು ಲಾಭಗಳಿಸುತ್ತವೆ. ಆದರೆ ಸರ್ಕಾರಿ ಕಾರ್ಖಾನೆಗೆ ಏಕೆ ಲಾಭ ಗಳಿಸಲು ಸಾಧ್ಯವಿಲ್ಲ ಎಂದು ಪ್ರಶ್ನಿಸಿದರು.

ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಕಾರ್ಖಾನೆ ಉಳಿಯಬೇಕು ಎಂಬ ಉದ್ದೇಶದಿಂದ 145 ಕೋಟಿ ರೂ ಅನುದಾನ ನೀಡಿದ್ದೆ. ಯಡಿಯೂರಪ್ಪ ಮಂಡ್ಯ ಜಿಲ್ಲೆಯವರು. ಅವರು ಈ ಕಾರ್ಖಾನೆಯನ್ನು ಅಭಿವೃದ್ಧಿ ಮಾಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರ ಕಾಲದಲ್ಲೇ ಖಾಸಗೀಕರಣಗೊಳಿಸುವ ಕೆಲಸ ಆರಂಭ ಮಾಡಿದರು ಎಂದರು.

ಕಾರ್ಖಾನೆಗೆ ಸಂಬಂಧಿಸಿದ ಆಸ್ತಿ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ಇದೆ. ರವೀಂದ್ರ ಕಲಾಕ್ಷೇತ್ರದ ಎದುರು ಭಾಗದಲ್ಲಿ ಕಾರ್ಖಾನೆಗೆ ಸೇರಿದ ಭೂಮಿ ಇದೆ. ಈ ಭೂಮಿಯನ್ನು ಅಭಿವೃದ್ಧಿಪಡಿಸಿ ಅದರಿಂದ ಬರುವ ಆದಾಯವನ್ನು ಕಾರ್ಖಾನೆಗೆ ಬಳಕೆ ಮಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಮೈಸುಗರ್ ಸಕ್ಕರೆ ಕಾರ್ಖಾನೆಯೊಂದಿಗೆ ಮಂಡ್ಯದ ಜನರಿಗೆ ಭಾವನಾತ್ಮಕ ಸಂಬಂಧವಿದೆ. ರೈತ ಹಿತರಕ್ಷಣಾ ವೇದಿಕೆ ಮೈಸೂರಿನಲ್ಲಿ ಧರಣಿ ನಡೆಸಿದೆ. ಯಾವುದೇ ಕಾರಣಕ್ಕೂ ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular