ರಾಜ್ಯದ ಗುಲ್ಬರ್ಗಾದಲ್ಲಿ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ. ಮಂಗಳವಾರ ಬೆಳಗ್ಗೆ 8 ಗಂಟೆ ಸಮಯದಲ್ಲಿ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ಅಕ್ಟೋಬರ್ 12ರಂದು ಬೆಳಗ್ಗೆ ಭಾರತೀಯ ಕಾಲಮಾನ 8:06:27ಗಂಟೆಗೆ ಲ್ಯಾಟ್:17.36 ಮತ್ತು ಉದ್ದ:77.30, ಆಳ:5 ಕಿಲೋಮೀಟರ್, ಸ್ಥಳ ಗುಲ್ಬರ್ಗ ಕರ್ನಾಟಕ” ಎಂದು ಎನ್ಸಿಎಸ್ ಟ್ವೀಟ್ ಮಾಡಿದೆ.
ಭಾನುವಾರ ಮುಂಜಾನೆ 6 ಗಂಟೆ ಸಮಯದಲ್ಲಿ ಲಘು ಭೂಕಂಪನ ಸಂಭವಿಸಿತ್ತು. ರಿಕ್ಟರ್ ಮಾಪನದಲ್ಲಿ ಭೂಕಂಪನದ ತೀವ್ರತೆ 3.4ರಷ್ಟು ದಾಖಲಾಗಿತ್ತು.