ಮಾಜಿ ಪ್ರಧಾನಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿಯ ಏಮ್ಸ್ ವೈದ್ಯರು ತಿಳಿಸಿದ್ದಾರೆ.
89 ವರ್ಷದ ಡಾ.ಸಿಂಗ್ ಅವರು ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಲ್ ಇಂಡಿಯ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಗೆ ದಾಖಲಿಸಿದ ನಂತರ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದರೂ ನಿಶಕ್ತಿ ಕಾಡಿತ್ತು. ಹಾಗಾಗಿ ಡಾ. ಮನಮೋಹನ್ ಸಿಂಗ್ ಅವರಿಗೆ ದ್ರವರೂಪದ ಆಹಾರವನ್ನು ನೀಡಲಾಗುತ್ತಿತ್ತು.
ಇಂದು ಏಮ್ಸ್ ವೈದ್ಯರು ಮನಮೋಹನ್ ಸಿಂಗ್ ಆರೋಗ್ಯದ ಕುರಿತು ಪ್ರತಿಕ್ರಿಯೆ ನೀಡಿದ್ದು, ಸಿಂಗ್ ಚೇತರಿಸಿಕೊಂಡಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.


