Friday, October 18, 2024
Google search engine
Homeಮುಖಪುಟನಾನೇ ಪೂರ್ಣಾವಧಿ ಕಾಂಗ್ರೆಸ್ ಅಧ್ಯಕ್ಷೆ - ಸೋನಿಯಾ

ನಾನೇ ಪೂರ್ಣಾವಧಿ ಕಾಂಗ್ರೆಸ್ ಅಧ್ಯಕ್ಷೆ – ಸೋನಿಯಾ

ಪಕ್ಷದೊಳಗಿನ ಟೀಕಾಕಾರರನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಸೋನಿಯಾ ಗಾಂಧಿ ನವದೆಹಲಿಯಲ್ಲಿ ಶನಿವಾರ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿ ಪೂರ್ಣಾವಧಿ ಪಕ್ಷದ ಅಧ್ಯಕ್ಷೆ ನಾನೇ ಎಂದು ಹೇಳಿದ್ದಾರೆ.

ಪಕ್ಷಕ್ಕೆ ಸಕ್ರಿಯ ಅಧ್ಯಕ್ಷರ ಅಗತ್ಯವಿದೆ ಎಂದು ಜಿ-23 ಗುಂಪಿನ ನಾಯಕರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಸೋನಿಯಾ “ನಾನು ಪೂರ್ಣಾವಧಿ ಅಧ್ಯಕ್ಷರಾಗಿ ಮುಂದುವರಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ

ಕಳೆದ ಎರಡು ವರ್ಷಗಳಲ್ಲಿ ನಮ್ಮ ಸಹದ್ಯೋಗಿಗಳು, ವಿಶೇಷವಾಗಿ ಕಿರಿಯರು ಪಕ್ಷದ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಜನರ ಬಳಿಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿಕೊಂಡಿದ್ದಾರೆ. ರೈತರ ಪ್ರತಿಭಟನೆ, ಕೊರೊನ ಸಮಯದಲ್ಲಿ ಪರಿಹಾರ ನೀಡುವುದು, ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಸರ್ಕಾರದ ಗಮನಕ್ಕೆ ತರಲಾಗಿದೆ. ಮಹಿಳೆಯರು, ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಬೆಲೆ ಏರಿಕೆ, ಸಾರ್ವಜನಿಕ ವಲಯದ ನಾಶದ ಕುರಿತು ಯುವ ಸಮುದಾಯ ಗಮನ ಸೆಳೆದಿದೆ ಎಂದು ಹೇಳಿದರು.

ಸಾರ್ವಜನಿಕ ಸಮಸ್ಯೆಗಳಿಗೆ ಪ್ರಾಮುಖ್ಯತೆ ವಹಿಸಿ ಸರ್ಕಾರ ಕೆಲಸ ಮಾಡಲಿಲ್ಲ. ಈ ಸಂಬಂಧ ಮನಮೋಹನ್ ಸಿಂಗ್ ಮತ್ತು ರಾಹುಲ್ ಅವರಂತೆ ನಾನು ಪ್ರಧಾನಿ ಬಳಿಗೆ ಕರೆದುಕೊಂಡು ಹೋಗಿರುವುದು ಎಲ್ಲರಿಗೂ ತಿಳಿದಿದೆ. ನಾನು ಸಮಾನ ಮನಸ್ಕ ರಾಜಕೀಯ ಪಕ್ಷಗಳೊಂದಿಗೆ ನಿರಂತರವಾಗಿ ಸಂವಹನ ನಡೆಸುತ್ತಿದ್ದೇನೆ. ರಾಷ್ಟ್ರೀಯ ಸಮಸ್ಯೆಗಳ ಕುರಿತು ಜಂಟಿ ಹೇಳಿಕೆ ನೀಡಿದ್ದೇವೆ. ಸಂಸತ್ತಿನಲ್ಲೂ ನಮ್ಮ ಕಾರ್ಯತಂತ್ರಗಳನ್ನು ಸಂಯೋಜಿಸಿದ್ದೇವೆ ಎಂದು ತಿಳಿಸಿದರು.

ನಾನು ಯಾವಾಗಲೂ ಪ್ರಾಮಾಣಿಕತೆಯನ್ನು ಮೆಚ್ಚುತ್ತೇನೆ. ಮಾಧ್ಯಮದ ಮೂಲಕ ನನ್ನೊಂದಿಗೆ ಮಾತನಾಡುವ ಅಗತ್ಯವಿಲ್ಲ. ಆದ್ದರಿಂದ ನಾವೆಲ್ಲರೂ ಮುಕ್ತ ಮತ್ತು ಪ್ರಾಮಾಣಿಕ ಚರ್ಚೆ ಮಾಡೋಣ. ಆದರೆ ಕೊಠಡಿಯ ಹೊರಗೆ ಮಾತನಾಡಬೇಕಾದಾಗ ಸಾಮೂಹಿಕ ನಿರ್ಧಾರಗಳನ್ನೇ ಮಾತನಾಡಬೇಕು ಎಂದರು.

ಜಿ-23 ನಾಯಕರಲ್ಲಿ ಒಬ್ಬರಾದ ಕಪಿಲ್ ಸಿಬಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ‘ನಮ್ಮ ಪಕ್ಷದಲ್ಲಿ ಖಾಯಂ ಅಧ್ಯಕ್ಷರಿಲ್ಲ. ಹಾಗಾಗಿ ಯಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇದು ಕೂಡ ನನ್ನ ಗಮನಕ್ಕೆ ಬಂದಿದೆ ಎಂದು ಹೇಳಿದರು.

ಇಡೀ ಪಕ್ಷ ಕಾಂಗ್ರೆಸ್ ನ ಪುನರುಜ್ಜೀವನ್ನು ಬಯಸುತ್ತದೆ. ಆದರೆ ಇದಕ್ಕೆ ಒಗ್ಗಟ್ಟು ಮತ್ತ ಪಕ್ಷದ ಹಿತಾಸಕ್ತಿಗಳನ್ನು ಪ್ರಮುಖವಾಗಿ ಇರಿಸಿಕೊಳ್ಳುವುದು ಅಗತ್ಯವಾಗಿದೆ. ಎಲ್ಲಕ್ಕಿಂತ ಮಿಗಿಲಾಗಿ ಇದಕ್ಕೆ ಸ್ವಯಂ ನಿಯಂತ್ರಣ ಮತ್ತು ಶಿಸ್ತಿನ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಸಿಡಬ್ಲ್ಯೂಸಿಯಿಂದ ನಾನು ಹಂಗಾಮಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದೇನೆ. ಅಧ್ಯಕ್ಷರನ್ನು ಆಯ್ಕೆ ಮಾಡುವ ದಿನಾಂಕ ಕೊರೊನ ಕಾರಣದಿಮದ ಮುಂದೂಡಲ್ಪಟ್ಟಿತು. ಈಗ ಪೂರ್ಣ ಪ್ರಮಾಣದ ಸಾಂಸ್ಥಿಕ ಚುನಾವಣೆಗಳ ವೇಳಾಪಟ್ಟಿ ನಿಮ್ಮ ಮುಂದೆ ಇದೆ ಎಂದು ಸೋನಿಯಾ ಗಾಂಧಿ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular