Saturday, October 19, 2024
Google search engine
Homeಮುಖಪುಟಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ದೇಶದಲ್ಲಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 35 ಪೈಸೆಯಷ್ಟು ಹೆಚ್ಚಳವಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 112 ರೂಪಾಯಿ ದಾಟಿ ದಾಖಲೆ ಬರೆದಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 106.54 ರೂಗೆ ಏರಿದ್ದರೆ, ಡೀಸೆಲ್ ಬೆಲೆ 95.27 ರೂಗೆ ಏರಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ತಿಳಿಸಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ 112.44 ರೂಗೆ ಏರಿದೆ. ಡೀಸೆಲ್ ಬೆಲೆ 103.26 ರೂ ಆಗಿದೆ.

ಚೆನ್ನೈ ನಗರದಲ್ಲಿ ಪೆಟ್ರೋಲ್ ಬೆಲೆ 103.26 ರೂಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ 99.68ರೂ ಏರಿದೆ.

ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ರಾಜ್ಯಗಳ ರಾಜಧಾನಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಮುಂಬೈನಲ್ಲಿ ಪೆಟ್ರೊಲ್ ಮತ್ತು ಡೀಸೆಲ್ ಬೆಲೆಯಲ್ಲಿ ದಾಖಲೆಯ ಏರಿಕೆ ಕಂಡಿದೆ.

ನಗರ ಪೆಟ್ರೋಲ್ ಡೀಸೆಲ್

ದೆಹಲಿ 106.54 ರೂ 95.27 ರೂ

ಮುಂಬೈ 112.44 ರೂ 103.26 ರೂ

ಚೆನ್ನೈ 103.26 ರೂ 99.68 ರೂ

ಕೋಲ್ಕತ್ತಾ 106.43 ರೂ 97.68 ರೂ

ಬೆಂಗಳೂರು 110.25 ರೂ 101.12 ರೂ

ರಾಜ್ಯದ ಇಂಡಿಯನ್ ಆಯಿಲ್ ಕಾರ್ಪೋರೇಷನ್, ಭಾರತ್ ಪೆಟ್ರೋಲಿಯಂ, ಹಿಂದೂಸ್ಥಾನ್ ಪೆಟ್ರೋಲಿಯಂ ಕಂಪನಿಗಳು ತೈಲ ದರವನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಏರಿಕೆಯನ್ನು ಅನುಸರಿಸಿ ನಿತ್ಯವೂ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಿ ಪ್ರಕಟಿಸುತ್ತಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular