Saturday, October 19, 2024
Google search engine
Homeಮುಖಪುಟ100 ಕೋಟಿ ಡೋಸ್ ನೀಡಿ ಸಂಭ್ರಮಿಸುವ ಬದಲು ಸತ್ತವರ ನೋಡಿ ಕ್ಷಮೆ ಯಾಚಿಸಿ - ಬಿ.ಕೆ.ಹರಿಪ್ರಸಾದ್

100 ಕೋಟಿ ಡೋಸ್ ನೀಡಿ ಸಂಭ್ರಮಿಸುವ ಬದಲು ಸತ್ತವರ ನೋಡಿ ಕ್ಷಮೆ ಯಾಚಿಸಿ – ಬಿ.ಕೆ.ಹರಿಪ್ರಸಾದ್

‘ಕೇಂದ್ರ ಬಿಜೆಪಿ ಸರ್ಕಾರದ ಅಸಮರ್ಥ ನಿರ್ವಣೆಯಿಂದಾಗಿ ಕೊರೊನದಿಂದ ದೇಶದಲ್ಲಿ 40 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದಾರೆ. ಜನ ಔಷಧಿ, ಆಕ್ಸಿಜನ್, ಲಸಿಕೆ ಸಿಗದೆ ಪರದಾಟ ನಡೆಸಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು 100 ಡೋಸ್ ಲಸಿಕೆ ಕೊಟ್ಟಿದ್ದೇವೆ ಎಂದು ಸಂಭ್ರಮಿಸಿ ಪ್ರಚಾರ ಪಡೆಯುವ ಬದಲು, ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ, ಸರ್ಕಾರಿ ಆಸ್ಪತ್ರೆಗಳಲ್ಲಿ ಎಷ್ಟು ಲಸಿಕೆ, ಖಾಸಗಿ ಆಸ್ಪತ್ರೆಗಳಲ್ಲಿ ಎಷ್ಟು ಲಸಿಕೆ ನೀಡಲಾಗಿದೆ ಎಂಬುದನ್ನು ಜನರಿಗೆ ಸ್ಪಷ್ಟಪಡಿಸಲಿ’ ಎಂದು ಆಗ್ರಹಿಸಿದರು.

‘ದೇಶದ ಪ್ರಧಾನಿ ಹಾಗೂ ಆರೋಗ್ಯ ಸಚಿವರು 100 ಕೋಟಿ ಲಸಿಕೆ ನೀಡಿದ್ದೇವೆ ಎಂದು ಸಂಭ್ರಮಿಸುತ್ತಿದ್ದಾರೆ. ಆದರೆ ಕೊರೊನ ಸಮಯದಲ್ಲಿ ಜನರಿಗೆ ಸ್ಪಂದಿಸುವ ವಿಚಾರದಲ್ಲಿ ಸರ್ಕಾರ ಹಾಗೂ ನಾವು ವಿಫಲರಾಗಿದ್ದೇವೆ. ಇದು ಸಂಭ್ರಮಿಸುವ ವಿಚಾರವಲ್ಲ. ಕೋವಿಡ್ ಬಂದಾಗ ಗಂಟೆ, ತಟ್ಟೆ ಬಾರಿಸುವಂತೆ ಹೇಳಿದರೆ ಹೊರತು ರೋಗವನ್ನು ಯಾವ ರೀತಿ ಎದುರಿಸಬೇಕು ಎಂಬ ಬಗ್ಗ ಜನರಿಗೆ ಸೂಕ್ತ ಮಾಹಿತಿ ನೀಡಲೇ ಇಲ್ಲ ಎಂದು ದೂರಿದರು.

ದೇಶದಲ್ಲಿ 100 ಕೋಟಿ ಜನರಿಗೆ ಲಸಿಕೆ ಕೊಟ್ಟಿದ್ದರೂ ಅದು 1 ಲಸಿಕೆ ಮಾತ್ರ. ಕೇವಲ 20-30 ಕೋಟಿ ಜನರಿಗೆ 2 ಡೋಸ್ ಲಸಿಕೆ ನೀಡಲಾಗಿದೆ. ಭಾರತದಲ್ಲಿ ಇಷ್ಟು ದಿನಗಳಲ್ಲಿ ಕೇವಲ ಒಂದು ಡೋಸ್ ಮಾತ್ರ ನೀಡುತ್ತಿರುವುದು ಸಂಭ್ರಮಿಸುವ ವಿಚಾರವೇ?’ ಎಂದು ಪ್ರಶ್ನಿಸಿದರು.

‘ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತರು, ನರ್ಸ್ ಸಿಬ್ಬಂದಿ, ವೈದ್ಯರು, ಆರೋಗ್ಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರೆ ಸಾಲದು. ಅವರಿಗೆ ಸರಿಯಾದ ಭತ್ಯೆ, ಇತರೆ ಅನುಕೂಲ ನೀಡಬೇಕು. ಆದರೆ ಈವರೆಗೂ ಆ ಬಗ್ಗೆ ಚಕಾರ ಎತ್ತಿಲ್ಲ. ಕೇವಲ ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಂಡರೆ ಪ್ರಯೋಜನೆವಿಲ್ಲ’ ಎಂದು ವ್ಯಂಗ್ಯವಾಡಿದರು.

‘ವಿಕೃತ ಮನಸ್ಥಿತಿಯವರು ಮಾತ್ರ 100 ಲಸಿಕೆ ಕೊಟ್ಟಿದ್ದೇವೆ ಎಂದು ಸಂಭ್ರಮಪಟ್ಟು ಪ್ರಚಾರ ಪಡೆಯುತ್ತಾರೆ. ದೇಶದ ಜನರಿಗೆ ಇಷ್ಟು ದಿನವಾದರೂ 2 ಡೋಸ್ ನೀಡಲು ಆಗಿಲ್ಲ, ಜನರು ಕಷ್ಟ ಅನುಭವಿಸುತ್ತಿದ್ದು ಇಂತಹ ಸಂದರ್ಭದಲ್ಲಿ ಸಂಭ್ರಮಿಸುವ ಬದಲು ಕ್ಷಮೆ ಕೊರಲಿ’ ಎಂದರು.

ಕೋವಿಡ್ ಆರಂಭದಲ್ಲಿ ಸಗಣಿ ಬಳಿದುಕೊಳ್ಳಿ, ಗಂಜಲ ಕುಡಿಯಿರಿ, ಹಪ್ಪಳ ತಿನ್ನಿ, ಗಂಟೆ ಬಾರಿಸಿ, ದೀಪ ಹಚ್ಚಿ ಎಂದ ನೀವು ಎಂತಹ ಅವಿವೇಕಿಗಳು ಎಂದು ಇಡೀ ದೇಶ ನೋಡಿದೆ. ಭಾರತ ಸರ್ಕಾರದ ನಿರ್ಧಾರ ನೋಡಿ ಇಡೀ ಜಗತ್ತು ನಕ್ಕಿದೆ. ಸಿ.ಟಿ. ರವಿ ಇದಕ್ಕೆ ಏನು ಉತ್ತರ ನೀಡುತ್ತಾರೆ ಎಂದು ಕೇಳಿದರು.

‘ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಭ್ರಷ್ಟರನ್ನು ಬಿಡುವುದಿಲ್ಲ ಎಂದು ಹೇಳುವ ಪ್ರಧಾನಿ, ನೀರವ್ ಮೋದಿ, ಚೋಕ್ಸಿ, ವಿಜಯ್ ಮಲ್ಯ ಅವರೆಲ್ಲ ವಿದೇಶಕ್ಕೆ ಹೋಗಲು ಬಿಟ್ಟಿದ್ದೇಕೆ? ವಿಶ್ವಗುರು ಎಂದು ಕರೆದುಕೊಳ್ಳುವ ಮೋದಿ ಯಾಕೆ ಅವರನ್ನು ಕರೆತರುತ್ತಿಲ್ಲ. ಇವೆಲ್ಲವೂ ಪ್ರಚಾರ ನಡೆಸಲು ಹೇಳುತ್ತಾರೆಯೇ ಹೊರತು, ಜನರನ್ನು ಕಾಯುವ ವಿಚಾರವಾಗಿ ಯಾವ ಕ್ರಮವೂ ಇಲ್ಲ’ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular