Friday, September 20, 2024
Google search engine
Homeಮುಖಪುಟಬಡ್ತಿ ಮೀಸಲಾತಿ ಬಗ್ಗೆ ತೀರ್ಪು ಕಾಯ್ದಿರಿಸಿದ ಸುಪ್ರೀಂ

ಬಡ್ತಿ ಮೀಸಲಾತಿ ಬಗ್ಗೆ ತೀರ್ಪು ಕಾಯ್ದಿರಿಸಿದ ಸುಪ್ರೀಂ

ಸರ್ಕಾರಿ ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡವರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ವಿಷಯದ ಕುರಿತು ಸುಪ್ರೀಂಕೋರ್ಟ್ ಮಂಗಳವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ.

ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಹೆಚ್ಚುವರಿ ಸಾಲಿಸಿಟರ್ ಜನರಲ್ ಬಲ್ಬೀರ್ ಸಿಂಗ್ ಮತ್ತು ವಿವಿಧ ರಾಜ್ಯಗಳ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲರು ಸೇರಿ ಎಲ್ಲಾ ಕಕ್ಷಿದಾರರ ವಾದವನ್ನು ಆಲಿಸಿತು.

ಸುಮಾರು 75 ವರ್ಷಗಳ ನಂತರವೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರನ್ನು ಮುಂದುವರಿದ ವರ್ಗದ ಅರ್ಹತೆಯ ಮಟ್ಟಕ್ಕೆ ತರಲಾಗಿಲ್ಲ ಎಂಬುದು ಕಟುಸತ್ಯವೆಂಬುದನ್ನು ಕೇಂದ್ರ ಸರ್ಕಾರ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನೊಳಗೊಂಡ ಪೀಠಕ್ಕೆ ಈ ಹಿಂದೆ ತಿಳಿಸಿತ್ತು.

ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು ಎ ಗುಂಪಿನ ಉದ್ಯೋಗಗಳಲ್ಲಿ ಉನ್ನತ ಹುದ್ದೆಯನ್ನು ಪಡೆಯುವುದು ಹೆಚ್ಚು ಕಷ್ಟಕರವಾಗಿದೆ ಮತ್ತು ಎಸ್.ಸಿ, ಎಸ್.ಟಿ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸುಪ್ರೀಂಕೋರ್ಟ್ ಕೆಲವು ಕಠಿಣ ನಿಯಮಗಳನ್ನು ಮಾಡುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ವಿಷಯದ ಕುರಿತು ತನ್ನ ನಿರ್ಧಾರವನ್ನು ಮತ್ತೆ ಹೇಳುವುದಿಲ್ಲ ಎಂದು ಪೀಠವು ಈ ಹಿಂದೆ ಹೇಳಿತ್ತು. ಅಲ್ಲದೆ ಅದನ್ನು ಹೇಗೆ ಜಾರಿಗೆ ತರಬೇಕು ಎಂಬುದನ್ನು ರಾಜ್ಯಗಳು ನಿರ್ಧರಿಸಬೇಕು ಎಂದು ಹೇಳಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular