Friday, September 20, 2024
Google search engine
Homeಮುಖಪುಟಎಂಇಎಸ್ ಪುಂಡಾಟಿಕೆಗೆ ಕೊನೆ ಹಾಡಿ - ಕುಮಾರಸ್ವಾಮಿ

ಎಂಇಎಸ್ ಪುಂಡಾಟಿಕೆಗೆ ಕೊನೆ ಹಾಡಿ – ಕುಮಾರಸ್ವಾಮಿ

ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ ಮುಖಭಂಗ ಅನುಭವಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ-ಎಂಇಎಸ್ ಈಗ ನ್ನ ರಾಜ್ಯೋತ್ಸವ ಹತ್ತಿರಕ್ಕೆ ಬಂದ ಸಂದರ್ಭದಲ್ಲೇ ಪುಂಡಾಟಿಕೆ ಶುರು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಕನ್ನಡದ ಅಸ್ಮಿತೆಯನ್ನೇ ಕೆಣಕುವ, ಕನ್ನಡಿಗರನ್ನು ಅಪಮಾನಿಸುವ ಹೇಯ ಕೆಲಕ್ಕೆ ಮುಂದಾಗಿದೆ. ಕೆಲ ದಿನಗಳಿಂದ ಬೆಳಗಾವಿಯಲ್ಲಿ ಕನ್ನಡಿಗರನ್ನು ಎಂಇಎಸ್ ವಿನಾಕಾರಣ ಕೆಣಕುತ್ತಿದೆ ಎಂದು ಹೇಳಿದ್ದಾರೆ.

ಪ್ರತಿಭಟನೆಯ ವೇಳೆ ಕರ್ನಾಟಕ ಸರ್ಕಾರವನ್ನು ಎಂಇಎಸ್ ಪುಂಡರು ಗೇಲಿ ಮಾಡಿದ್ದಾರೆ. ಅಲ್ಲಿನ ಸರ್ಕಾರಿ ಕಚೇರಿಗಳಲ್ಲಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲೇ ಕೊಡಬೇಕು ಎಂದು ಒತ್ತಾಯಿಸುವ ಭರದಲ್ಲಿ ಕರ್ನಾಟಕ ಸರ್ಕಾರವನ್ನು ನಾಲಾಯಕ್ ಎಂದು ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಖಂಡನೀಯ ಎಂದು ತಿಳಿಸಿದ್ದಾರೆ.

ರಾಜಕೀಯವಾಗಿ ಮೂಲೆಗುಂಪಾಗಿರುವ ಎಂಇಎಸ್, ತಮ್ಮ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಗೊಂದಲ, ಗದ್ದಲ ಉಂಟುಮಾಡುತ್ತಿದೆ. ಭಾಷಾ ಭ್ರಾತೃತ್ವ, ಸ್ನೇಹಶೀಲತೆ ಹಾಗೂ ಶಾಂತಿ ಸಹನೆಗೆ ಹೆಸರಾಗಿರುವ ಕುಂದಾನಗರಿಯ ಪ್ರತಿಷ್ಠೆಯನ್ನು ಹಾಳು ಮಾಡುವ ದುರುದ್ದೇಶ ಇವರಿಗೆ ಇದೆ ಎಂದು ದೂರಿದ್ದಾರೆ.

ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರ್ಕಾರ ಅಲಕ್ಷ್ಯ ಮಾಡಲೇಬಾರದು, ಕನ್ನಡವನ್ನು ಅಪಮಾನಿಸುವ ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಸರ್ಕಾರವನ್ನು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular