Saturday, October 19, 2024
Google search engine
Homeಮುಖಪುಟಸಿಂಧಗಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಗೆಲುವು

ಸಿಂಧಗಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಗೆಲುವು

ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡು ಬಂದ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಕಾಂಗ್ರೆಸ್ ವಿರುದ್ದ 30 ಸಾವಿರ ಮತಗಳ ಅಂತರ ಗೆಲುವು ಸಾಧಿಸಿದ್ದಾರೆ. ರಮೇಶ್ ಗೆಲುವು ಸಾಧಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಸಿಂಧಗಿಯಲ್ಲಿ ಬಿಜೆಪಿಯ ರಮೇಶ್ ಭೂಸನೂರ 93,865 ಮತಗಳನ್ನು ಪಡೆದಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ 64,489 ಮತ ಗಳಿಸಿ ಸೋಲು ಕಂಡರು. ರಮೇಶ್ ಅವರು ಮನಗೂಳಿ ಅವರಿಗಿಂತ 31,185 ಮತಗಳನ್ನು ಹೆಚ್ಚಿಗೆ ಪಡೆದಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಇತ್ತು. ಪ್ರಚಾರದ ಸಂದರ್ಭದಲ್ಲಿ ಉಭಯ ಪಕ್ಷಗಳ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡಿದ್ದರು. ಅಶೋಕ್ ಮನಗೂಳಿ ಅವರು ತಂದೆಯ ಸಾವಿನ ಅನುಕಂಪದ ಅಲೆಯಲ್ಲಿ ಗೆಲ್ಲಬಹುದು ಎಂಬ ಲೆಕ್ಕಾಚಾರಕ್ಕೆ ಉಲ್ಟಾ ಆಗಿದೆ.

ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಗೆದ್ದು ವಿಜಯ ಮಾಲೆ ಹಾಕಿಕೊಂಡರು. ನನಗೆ ಮತ ನೀಡಿ ಗೆಲ್ಲಿಸಿದ ಎಲ್ಲ ಮತದಾರರಿಗೂ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ರಮೇಶ್ ಮಾಧ್ಯಮಗಳಿಗೆ ತಿಳಿಸಿದರು.

ಜೆಡಿಎಸ್ ಅಭ್ಯರ್ಥಿ ನಜಿಯಾ ಶಕೀಲ ಅಂಗಡಿ ಕೇವಲ 4353 ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ. ಜೆಡಿಎಸ್ ಸ್ಪರ್ಧೆಗೆ ಮಾತ್ರ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿತ್ತು ಎಂಬುದು ಇದರಿಂದ ಸಾಬೀತಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular