ಕೇಂದ್ರ ಸರ್ಕಾರ ಇಂಧನ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಬೆನ್ನ ಹಿಂದೆಯೇ ಕರ್ನಾಟಕ ರಾಜ್ಯ ಸರ್ಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ತೀರ್ಮಾನಿಸಿದೆ. ಸಂಜೆ 6 ಗಂಟೆ ನಂತರ ಪರಿಷ್ಕೃತ ದರ ಜಾರಿಗೆ ಬರಲಿದೆ.
ಈ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ ಅಂದಾಜು 2100 ಕೋಟಿ ರೂಪಾಯಿ ಕೆಎಸ್.ಟಿಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡೀಸೆಲ್ ಬೆಲೆ ಅಂದಾಜು 81.50 ರೂ ಆಗುವ ಸಾಧ್ಯದ ಇದೆ. ಇಂದು ಸಂಜೆಯಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದ ದೀಪಾವಳಿ ಉಡುಗೊರೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆ ಪೆಟ್ರೋಲ್ ಬೆಲೆ 107.64 ಹಾಗು ಡೀಸೆಲ್ ಬೆಲೆ 92.03 ರೂ ಇತ್ತು.


