Thursday, January 29, 2026
Google search engine
Homeಮುಖಪುಟಬಿಜೆಪಿ ಸೋಲಿಸಿದರೆ ಇಂಧನ ಬೆಲೆ ಇಳಿಯುತ್ತದೆ ಎಂಬುದು ಮೋದಿ ಪಾಠ - ಸಿದ್ದರಾಮಯ್ಯ ವ್ಯಂಗ್ಯ

ಬಿಜೆಪಿ ಸೋಲಿಸಿದರೆ ಇಂಧನ ಬೆಲೆ ಇಳಿಯುತ್ತದೆ ಎಂಬುದು ಮೋದಿ ಪಾಠ – ಸಿದ್ದರಾಮಯ್ಯ ವ್ಯಂಗ್ಯ

ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಪ್ರಧಾನಿ ನರೇಂದ್ರ ಮೋದಿ ಹೇಳಿಕೊಟ್ಟಿರುವುದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಇದು ಪ್ರಧಾನಿಗಳು ನೀಡಿದ ದೀಪಾವಳಿ ಕೊಡುಗೆ ಅಲ್ಲ. ಇದು ದೇಶಾದ್ಯಂತ ನಡೆದ ಉಪಚುನಾವಣೆಗಳ ಕೊಡುಗೆ ಎಂದು ಹೇಳಿದ್ದಾರೆ.

ಅಡುಗೆ ಅನಿಲ ಬೆಲೆ ಸಾವಿರ ರೂಪಾಯಿ ತಲುಪಿದೆ. ಆಹಾರ ಧಾನ್ಯ, ಖಾದ್ಯ ತೈಎಲದ ಬೆಲೆ ಏರುತ್ತಲೇ ಇದೆ. ಈ ಬೆಲೆಗಳು ಕೂಡ ಇಳಿಯಬೇಕಾದರೆ ಬಿಜೆಪಿಯನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು ಸೋಲಿಸುತ್ತಲೇ ಇರಬೇಕು ಎಂದು ಸಲಹೆ ನೀಡಿದ್ದಾರೆ.

ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಹಾಗೂ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆಗಳು ನಡೆಯಲಿವೆ. ನರೇಂದ್ರ ಮೋದಿ ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ಮಾಡಬೇಕು ಎಂದು ಹೇಳಿದ್ದಾರೆ.

ಯುಪಿಎ ಕಾಲದಲ್ಲಿ ಕಚ್ಚಾತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 65 ರೂಪಾಯಿಗಳಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಚ್ಚಾತೈಲ ಬೆಲೆ ಬ್ಯಾರಲ್ ಗೆ 82 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 100 ರೂಪಾಯಿಗೆ ಇಳಿಸಿದ್ದು ಮಹಾನ್ ಸಾಧನೆ ಎಂದು ಲೇವಡಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular