ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ವರಿಷ್ಠರು, ಅವರ ಮಕ್ಕಳು ಮತ್ತು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆ ಗಂಭೀರವಾಗಿ ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಿಯಾಂಕ ಖರ್ಗೆ, ಮುಖ್ಯಮಂತ್ರಿಗಳು ಬಿಟ್ ಕಾಯಿನ್ ಹಗರಣವನ್ನು ಜಾರಿ ನಿರ್ದೇಶಯನಾಲಯ ಮತ್ತು ಸಿಬಿಐ ತನಿಖಗೆ ವಹಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನು ನಂಬುವುದಾದರೂ ಹೇಗೆ? ಎಂದು ಪ್ರಶ್ನಿಸಿರುವ ಪ್ರಿಯಾಂಕ ಖರ್ಗೆ ಈ ಬಗ್ಗೆ ಕೂಡಲೇ ಮುಖ್ಯಮಂತ್ರಿಗಳು ದಾಖಲೆ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ್ದಾರೆ.
ಬಿಟ್ ಕಾಯಿನ್ ದೊಡ್ಡ ಹಗರಣ. ಈ ಹಗರಣದಲ್ಲಿ ಬಿಜೆಪಿ ನಾಯಕರು ಶಾಮೀಲಾಗಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿಗಳ ತಲೆದಂಡವಾಗಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರ ಹೆಸರೂ ಇದೆ: ಮುಖ್ಯಮಂತ್ರಿ
ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಿಯಾಂಕ ಖರ್ಗೆ ಮೊದಲು ಮಾಹಿತಿ ಪಡೆಯಲಿ. ಆನಂತರ ಮಾತನಾಡಲಿ. ಕಾಂಗ್ರೆಸ್ ನಾಯಕರ ಹೆಸರೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಕೇಳಿಬಂದಿದೆ. ಪಾಪ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಪ್ರಿಯಾಂಕ ಖರ್ಗೆಯವರ ಹೇಳಿಕೆಗೆ ಕೆರಳಿ ಕೆಂಡವಾಗಿದ್ದಾರೆ.


