ಟಿ-20 ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಸೋಲು ಕಂಡ ನಂತರ ಭಾರತೀಯ ಕ್ರಿಕೆಟ್ ತಾರೆಯೊಬ್ಬರ ಮಗಳಿಗೆ ಆನ್ ಲೈನ್ ನಲ್ಲಿ ಅತ್ಯಾಚಾರ ಬೆದರಿಕೆ ಹಾಕಿದ್ದ ಹೈದರಾಬಾದ್ ವ್ಯಕ್ತಿಯನ್ನು ಮುಂಬೈ ಸೈಬರ್ ಪೊಲೀಸರು ಹೈದರಾಬಾದ್ ನಲ್ಲಿ ಬುಧವಾರ ಬಂಧಿಸಿದ್ದಾರೆ.
ಆನ್ ಲೈನ್ ನಲ್ಲಿ ಕ್ರಿಕೆಟಿಗನ ಪುತ್ರಿಗೆ ಅತ್ಯಾಚಾರ ಬೆದರಿಕೆ ಹಾಕಿದ ಯುವಕನನ್ನು 23 ವರ್ಷದ ರಾಮನಾಗೇಶ್ ಅಲಿಬಥಿನಿ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆಗಾಗಿ ಮುಂಬೈಗೆ ಕರೆತರಲಾಗುತ್ತಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ರಾಮನಾಗೇಶ್ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದು ಈ ಹಿಂದೆ ಪುಡ್ ಡೆಲಿವರಿ ಆಪ್ ನಲ್ಲಿ ಕೆಲಸ ಮಾಡಿರುವುದು ಪತ್ತೆಯಾಗಿದೆ. ಬೆದರಿಕೆ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದ್ದು ವೈರಲ್ ಆಗಿದೆ.
ಆರಂಭದಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ ಬಳಕೆದಾರರು ವಿದೇಶದಲ್ಲಿ ನೆಲೆಸಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಆದರೆ ತಾಂತ್ರಿಕ ಪುರಾವೆಗಳ ಆಧಾರದ ಮೇಲೆ ಪೊಲೀಸರು ಹೈದರಾಬಾದ್ ವ್ಯಕ್ತಿಯೇ ಈ ಬೆದರಿಕೆ ಹಾಕಿದ್ದಾನೆ ಎಂದು ಕಂಡುಕೊಂಡಿದ್ದಾರೆ.


