Friday, September 20, 2024
Google search engine
Homeಮುಖಪುಟಮೆಲ್ಬೋರ್ನ್ ನಲ್ಲಿ ಗಾಂಧೀಜಿ ಕಂಚಿನ ಪ್ರತಿಮೆ ಧ್ವಂಸ - ಮಾರಿನಸ್ ಖಂಡನೆ

ಮೆಲ್ಬೋರ್ನ್ ನಲ್ಲಿ ಗಾಂಧೀಜಿ ಕಂಚಿನ ಪ್ರತಿಮೆ ಧ್ವಂಸ – ಮಾರಿನಸ್ ಖಂಡನೆ

ಭಾರತ ಸರ್ಕಾರ ಆಸ್ಟ್ರೇಲಿಯಾಕ್ಕೆ ಉಡುಗೊರೆಯಾಗಿ ನೀಡಿದ ಮಹಾತ್ಮ ಗಾಂಧಿ ಅವರ ದೊಡ್ಡ ಗಾತ್ರದ ಕಂಚಿನ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು ಪ್ರಧಾನಿ ಸ್ಕಾಟ್ ಮಾರಿಸನ್ ಇದು ಅವಮಾನಕರ ಘಟನೆಯಾಗಿದೆ ಎಂದು ಖಂಡಿಸಿದ್ದಾರೆ. ಭಾರತೀಯ ಆಸ್ಟ್ರೇಲಿಯನ್ ಸಮುದಾಯಕ್ಕೆ ತೀವ್ರ ಆಘಾತ ಮತ್ತು ನಿರಾಶೆ ಉಂಟುಮಾಡಿದೆ ಎಂದು ಹೇಳಿದ್ದಾರೆ.

ಭಾರತದ 75 ವರ್ಷಗಳ ಸ್ವಾತಂತ್ರ್ಯದ ಆಚರಣೆಯ ಅಂಗವಾಗಿ ಪ್ರಧಾನಿ ಮಾರಿಸನ್ ಭಾರತದ ಕಾನ್ಸುಲ್ ಜನರಲ್ ರಾಜ್ ಕುಮಾರ್ ಮತ್ತು ಆಸ್ಟ್ರೇಲಿಯ ನಾಯಕರೊಂದಿಗೆ ಶುಕ್ರವಾರ ರೌವಿಲ್ಲೆಯಲ್ಲಿರುವ ಆಸ್ಟ್ರೇಲಿಯದ ಭಾರತೀಯ ಸಮುದಾಯ ಕೇಂದ್ರದಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸಿದ ಕೆಲ ಗಂಟೆಗಳ ನಂತರ ಈ ಘಟನೆ ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಮಟ್ಟದ ಅಗೌರವವನ್ನು ನೋಡುವುದು ಅವಮಾನಕರ ಮತ್ತು ಅತ್ಯಂತ ಬೇಸರದ ಸಂಗತಿಯಾಗಿದೆ ಎಂದು ಮಾರಿಸನ್ ಹೇಳಿದ್ದಾರೆ.

ವಿಶ್ವದಲ್ಲೇ ಅತ್ಯಂತ ಯಶಸ್ವಿ ಬಹುಸಂಸ್ಕೃತಿ ಮತ್ತು ವಸಲೆ ರಾಷ್ಟ್ರವಾಗಿರುವ ದೇಶದಲ್ಲಿ ಸಾಂಸ್ಕೃತಿಕ ಸ್ಮಾರಕಗಳ ಮೇಲಿನ ದಾಳಿಯನ್ನು ಸಹಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಇದಕ್ಕೆ ಕಾರಣರಾದವರು ಆಸ್ಟ್ರೇಲಿಯನ್ ಭಾರತೀಯ ಸಮುದಾಯಕ್ಕೆ ಅಗೌರ ತೋರಿದ್ದು ಅವರಿಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular