Friday, September 20, 2024
Google search engine
Homeಮುಖಪುಟಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ - ನ.19, 20ರಂದು ಶಾಲೆಗಳಿಗೆ ರಜೆ ಘೋಷಣೆ

ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ – ನ.19, 20ರಂದು ಶಾಲೆಗಳಿಗೆ ರಜೆ ಘೋಷಣೆ

ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ನವೆಂಬರ್ 19 ಮತ್ತು 20ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮತ್ತು ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ರಾಮನಗರ, ಚಿತ್ರದುರ್ಗ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ರಜೆ ಘೋಷಣೆಯಾಗಿದೆ.

ಬೆಂಗಳೂರಿನಲ್ಲಿ ನವೆಂಬರ್ 19ರಂದು ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಮಳೆ, ಶೀತಗಾಳಿಯ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಗೆ ಬರುವುದು ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ/ಶಿಶುವಿಹಾರ ಹಾಗೂ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.

ತುಮಕೂರು ಜಿಲ್ಲೆಯಲ್ಲಿ ಬಿರುಗಾಳಿಯಿಂದ ಕೂಡಿದ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ನವೆಂಬರ್ 19 ಮತ್ತು 20ರಂದು ಜಿಲ್ಲಾದಿಕಾರಿಗಳು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲ ಅಂಗನವಾಡಿ/ಶಿಶುವಿಹಾರ, ಸರ್ಕಾರಿ/ಅನುದಾನಿತ/ಅನುದಾನರಹಿತ ಕಿರಿಯ/ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲೂ ನಿರಂತರ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಶಾಲೆಗೆ ಬಂದು ಹೋಗಲು ತೊಂದರೆಯಾಗಬಹುದಾಗಿರುವ ಹಿನ್ನೆಲೆಯಲ್ಲಿ ನವೆಂಬರ್ 19 ಮತ್ತು 20ರಂದು ರಜೆ ಘೋಷಣೆಯಾಗಿದೆ.

ಉತ್ತರ ಕರ್ನಾಟಕದ ಒಳನಾಡಿನಲ್ಲೂ ಭಾರೀ ಮಳೆ ಸುರಿಯಲಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಒಟ್ಟು 13 ಜಿಲ್ಲೆಗಳಲ್ಲಿ ಮಳೆ ಸುರಿಯಲಿದ್ದು ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular