ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ರಾಜಿನಾಮೆ ಪಡೆದುಕೊಂಡು ಬಂಧಿಸಬೇಕೆಂಬುದೂ ಸೇರಿ 6 ಬೇಡಿಕೆಗಳ ಪಟ್ಟಿಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿಟ್ಟಿದೆ.
ಉತ್ತರ ಪ್ರದೇಶದ ಲಖಿಂಪುರಖೇರಿಯಲ್ಲಿ ರೈತರನ್ನು ಹತ್ಯೆ ಮಾಡಿರುವ ಆರೋಪ ಹೊತ್ತಿರುವ ಅಶಿಶ್ ಮಿಶ್ರಾ ಪುತ್ರನನ್ನು ಈಗಾಗಲೇ ಬಂಧಿಸಲಾಗಿದ್ದು ರೈತರ ಹತ್ಯಾ ಘಟನೆಯ ಮಾಸ್ಟರ್ ಮೈಂಡ್ ಎಂದು ಕರೆದಿದೆ.
ನಾವು ನಡೆಸುತ್ತಿರುವ ಪ್ರತಿಭಟನೆ ಕೇವಲ ಮೂರು ಕೃಷಿ ಕಾಯ್ದೆಗಲನ್ನು ರದ್ದು ಮಾಡುವುದಕ್ಕೆ ಮಾತ್ರ ಸೀಮಿತವಲ್ಲ. ಇತರೆ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದೆ.
ಉತ್ಪಾದನೆಯ ಸಮಗ್ರ ವೆಚ್ಚದ ಸೂತ್ರವನ್ನು ಆಧರಿಸಿ ಸಿ2+50 ನೀಡಬೇಕು. ಎಲ್ಲಾ ಕೃಷಿ ಉತ್ಪನ್ನಗಳಿಗೆ ದರ ಖಾತ್ರಿ ನೀಡಬೇಕು ಕರಡು ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು. ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ಪ್ರತಿಭಟನೆಯಲ್ಲಿ ಮೃತಪಟ್ಟ 700 ರೈತ ಕುಟುಂಬಳಿಗೆ ಸೂಕ್ತ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಬೇಕು. ಅವರ ನೆನಪಿಗಾಗಿ ಸ್ಮಾರಕ ನಿರ್ಮಿಸಬೇಕು ಎಂದು ಆಗ್ರಹಿಸಿದೆ.
ರೈತ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ಮಾತನಾಡಿ, ನಾವು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಚರ್ಚಿಸಿದ್ದೇವೆ. ಬಳಿಕ ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಎಸ್.ಕೆ.ಎಂನ ಪೂರ್ವ ನಿರ್ಧಾರಿತ ಕಾರ್ಯಕ್ರಮಗಳು ಹಾಗೆಯೇ ಮುಂದುವರೆಯಲಿವೆ ಎಂದು ತಿಳಿಸಿದರು.