ಕಿವುಡ ಮತ್ತು ಮೂಕ ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಮಾಡಿರುವ ಘಟನೆ ದೆಹಲಿಯ ಈಶಾನ್ಯ ಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನವೆಂಬರ್ 21 ರಿಂದ ದೆಹಲಿಯ ಮೌಜ್ ಪುರದ ನಿವಾಸಿ 34 ವರ್ಷದ ರೆಹಾನ್ ಕಿವುಡ ಮತ್ತು ಮೂಕ ಬಾಲಕಿ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.
ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ಬಂದ ಸಂತ್ರಸ್ತ ಬಾಲಕಿ ಡಿಸೆಂಬರ್ 5ರಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಸಂತ್ರಸ್ತೆ ಕಿವುಡ ಮತ್ತು ಮೂಕಳಾದ ಕಾರಣ, ಆಕೆಯ ಹೇಳಿಕೆಯನ್ನು ದಾಖಲಿಸಲು ಆಗಲಿಲ್ಲ.
ನಂತರ ಖಾಸಗಿ ಇಂಟರ್ ಪ್ರಿಟರ್ ವ್ಯವಸ್ಥೆ ಮಾಡಿ ಡಿಸಿಡಬ್ಲ್ಯೂ ಸಲಹೆಗಾರರು ಆಕೆಯ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿ ಹೇಳಿದರು.
ಭಜನಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ376(2)(ಎನ್) ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ.


