Thursday, November 21, 2024
Google search engine
Homeಆರ್ಥಿಕಮುಖ್ಯ ಆರ್ಥಿಕ ಸಲಹೆಗಾರರ ಸ್ಥಾನಕ್ಕೆ ಮೂರು ಹೆಸರು

ಮುಖ್ಯ ಆರ್ಥಿಕ ಸಲಹೆಗಾರರ ಸ್ಥಾನಕ್ಕೆ ಮೂರು ಹೆಸರು

ದೆಹಲಿಯ ಸ್ಕೂಲ್ ಆಫ್ ಎಕನಾಮಿಕ್ಸ್ ಪ್ರೊ. ಪಾಮಿ ದುವಾ, ನ್ಯಾಷನಲ್ ಕೌನ್ಸಿಲ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ಚ್ ಮಹಾ ನಿರ್ದೇಶಕಿ ಪೂನಂ ಗುಪ್ತ ಹಾಗೂ ಪ್ರಧಾನ ಆರ್ಥಿಕ ಸಲಹೆಗಾರ ಸಂಜೀವ್ ಸನ್ಯಾಲ್ ಅವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.

ಮುಂದಿನ ವಾರ ಮುಖ್ಯ ಆರ್ಥಿಕ ಸಲಹೆಗಾರ ಹುದ್ದೆಯಿಂದ ನಿರ್ಗಮಿಸಲಿರುವ ಕೆ.ವಿ.ಸುಬ್ರಮಣಿಯನ್ ಅವರ ಸ್ಥಾನಕ್ಕೆ ಕೇಂದ್ರ ಸರ್ಕಾರ ಮೂರು ಹೆಸರುಗಳನ್ನು ಅಂತಿಮಗೊಳಿಸಿದೆ.

ದೆಹಲಿಯ ಸ್ಕೂಲ್ ಆಫ್ ಎಕನಾಮಿಕ್ಸ್ ಪ್ರೊ. ಪಾಮಿ ದುವಾ, ನ್ಯಾಷನಲ್ ಕೌನ್ಸಿಲ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ಚ್ ಮಹಾ ನಿರ್ದೇಶಕಿ ಪೂನಂ ಗುಪ್ತ ಹಾಗೂ ಪ್ರಧಾನ ಆರ್ಥಿಕ ಸಲಹೆಗಾರ ಸಂಜೀವ್ ಸನ್ಯಾಲ್ ಅವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.

ಹದಿನೈದನೇ ಹಣಕಾಸು ಆಯೋಗದ ಅಧ್ಯಕ್ಷ ಎನ್.ಕೆ.ಸಿಂಗ್ ನೇತೃತ್ವದ ಆಯ್ಕೆ ಸಮಿತಿ ಪಟ್ಟಿಯನ್ನು ಸಿದ್ದಪಡಿಸಿದ್ದು 10ಕ್ಕೂ ಹೆಚ್ಚು ಹೆಸರುಗಳನ್ನು ಮುಖ್ಯ ಆರ್ಥಿಕ ಸಲಹೆಗಾರರ ಹುದ್ದೆಗೆ ಪರಿಗಣಿಸಿದೆ. ಆದರೆ ಈ ಪಟ್ಟಿಯಲ್ಲಿ ಮೂವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಪೂನಂ ಗುಪ್ತ ಅವರು ಜಾಗತಿಕ ಮ್ಯಾಕ್ರೋ ಮತ್ತು ಮಾರುಕಟ್ಟೆ ಸಂಶೋಧನೆ, ಇಂಟರ್ ನ್ಯಾಷನಲ್ ಫೈನಾನ್ಸ್ ಕಾರ್ಪೋರೇಷನ್ ಮತ್ತು ವಿಶ್ವ ಬ್ಯಾಂಕ್ ನಲ್ಲಿ ಭಾರತದ ಪ್ರಮುಖ ಅರ್ಥಶಾಸ್ತ್ರಜ್ಞರಾಗಿ ಕೆಲಸ ಮಾಡಿದ್ದಾರೆ.

ಗುಪ್ತ ಅವರು ಹಿಂದೆ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಪಬ್ಲಿಕ್ ಫೈನಾನ್ಸ್ ಅಂಡ್ ಪಾಲಿಸಿಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚೇರ್ ಪ್ರೊಫೆಸರ್ ಆಗಿದ್ದರು. ಇಂಟರ್ ನ್ಯಾಷನಲ್ ಮಾನಿಟರಿ ಫಂಡ್ ನಲ್ಲೂ ಕೆಲಸ ಮಾಡಿದ್ದು ಕಳೆದ ತಿಂಗಳು ಪ್ರಧಾನಮಂತ್ರಿ ಆರ್ಥಿಕ ಸಲಹಾ ಮಂಡಳಿಯಲ್ಲಿ ಅರೆಕಾಲಿಕ ಸದಸ್ಯರಾಗಿ ಸೇರ್ಪಡೆಗೊಂಡಿದ್ದಾರೆ.

ಪ್ರೊ.ದುವಾ ಅವರು ಈ ಹಿಂದೆ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯ ಸದಸ್ಯರಾಗಿದ್ದರು. ಅವರು ಕನೆಕ್ಟಿಕಟ್ ವಿಶ್ವವಿದ್ಯಾನಿಲಯ ಮತ್ತು ಯೇಲ್ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದಾರೆ. RBI ಮತ್ತು ಸರ್ಕಾರದ ತಜ್ಞರ ಸಮಿತಿಗಳ ಸದಸ್ಯರಾಗಿದ್ದಾರೆ.

ಡಾಯ್ಚ ಬ್ಯಾಂಕ್‌ನ ಮಾಜಿ ಜಾಗತಿಕ ತಂತ್ರಜ್ಞ ಮತ್ತು ವ್ಯವಸ್ಥಾಪಕ ನಿರ್ದೇಶಕ ಸನ್ಯಾಲ್ ಅವರನ್ನು ಫೆಬ್ರವರಿ 2017 ರಲ್ಲಿ ಪ್ರಧಾನ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಲಾಯಿತು. ಈಗಾಗಲೇ ಬಜೆಟ್‌ ಪೂರ್ವ ಚರ್ಚೆಗಳು ಆರಂಭವಾಗಿದ್ದು, ಸಿಇಎ ನೇಮಕವಾಗುವವರೆಗೆ ಆರ್ಥಿಕ ಸಮೀಕ್ಷೆಯ ಉಸ್ತುವಾರಿಯನ್ನು ಸನ್ಯಾಲ್‌ ಅವರಿಗೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular