ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಶಾಲೆಯ ಶೌಚಾಲಯದ ಗೋಡೆ ಕುಸಿದುಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಮೂರು ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಸ್ಟಾಲಿನ್ ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 3 ಲಕ್ಷ ರೂ ನೆರವು ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಸರ್ಕಾರಿ ಅನುದಾನಿತ ಶಾಲೆಯ ವಿದ್ಯಾರ್ಥಿಗಳು ಶೌಚಾಲಯದ ಬಳಿ ಸರತಿ ಸಾಲಿನಲ್ಲಿ ನಿಂತಿದ್ದರು. ಈ ಸಂದರ್ಭದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಶಿಥಿಲಗೊಂಡಿದ್ದ ಗೋಡೆ ಕುಸಿದಿದೆ. ಪರಿಣಾಮ ವಿದ್ಯಾರ್ಥಿಗಳು ಮರಣ ಹೊಂದುವಂತೆ ಆಗಿದೆ.
ಮಚ್ಚಿದ ಬಾವಿಯ ಮೇಲೆ 2014ರಲ್ಲಿ ಶೌಚಾಲಯದ ಗೋಡೆಯ ಬಗ್ಗೆ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ.
ಶೌಚಾಲಯ ಗೋಡೆ ಕುಸಿದುಬಿದ್ದ ಹಿನ್ನೆಲೆಯಲ್ಲಿ ಎಲ್ಲ ಹಳೆಯ ಕಟ್ಟಡಗಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ತಂಡವನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿಷ್ಣು ತಿಳಿಸಿದ್ದಾರೆ.