Thursday, September 19, 2024
Google search engine
Homeಮುಖಪುಟಪಶ್ಚಿಮಬಂಗಾಳದಲ್ಲಿ ಮತದಾನದ ವೇಳೆ ಬಾಂಬ್ ಸ್ಫೋಟ - ಮೂವರು ಮತದಾರರಿಗೆ ಗಾಯ

ಪಶ್ಚಿಮಬಂಗಾಳದಲ್ಲಿ ಮತದಾನದ ವೇಳೆ ಬಾಂಬ್ ಸ್ಫೋಟ – ಮೂವರು ಮತದಾರರಿಗೆ ಗಾಯ

ಗಾಯಗೊಂಡವರಲ್ಲಿ ಒಬ್ಬರು ಕಾಲು ಕಳೆದುಕೊಂಡಿದ್ದು, ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪಶ್ಚಿಮ ಬಂಗಾಳದಲ್ಲಿ ಡಿಸೆಂಬರ್ 19ರಂದು ನಡೆಯುತ್ತಿರುವ ಕೆಎಂಸಿ ಚುನಾವಣೆ ವೇಳೆ ಕೋಲ್ಕತ್ತಾದ ಸಿಲ್ಡಾಹ್ ಪ್ರದೇಶದಲ್ಲಿ ಬಾಂಬ್ ಸ್ಪೋಟಗೊಂಡ ಪರಿಣಾಮ ಮೂವರು ಮತದಾರರು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಒಬ್ಬರು ಕಾಲು ಕಳೆದುಕೊಂಡಿದ್ದು, ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮತದಾನದ ವೇಳೆ ಸಿಲ್ಡಾಹ್ ನ ವಾರ್ಡ್ ಸಂಖ್ಯೆ 36ರ ಟಾಕಿ ಶಾಲೆಯ ಮುಂಭಾಗದಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದರು,

ಮೂವರು ವ್ಯಕ್ತಿಗಳು ಎರಡು ಬಾಂಬ್‌ಗಳನ್ನು ಎಸೆದಿದ್ದು, ಆರೋಪಿಗಳನ್ನು ಗುರುತಿಸಲು ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ರಾಜ್ಯ ಚುನಾವಣಾ ಆಯೋಗ ಈ ಬಗ್ಗೆ ಪೊಲೀಸರಿಂದ ವರದಿ ಕೇಳಿದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular