ಮತಾಂತರ ವಿರೋಧಿ ಮಸೂದೆ ಎಂದೇ ಕರೆಯಲ್ಪಡುವ ಧಾರ್ಮಿಕ ಸ್ವಾತಂತ್ರ್ಯದ ಕರ್ನಾಟಕ ಹಕ್ಕು ಮಸೂದೆಯನ್ನು ವಿಧಾನಸಭೆ ಯಲ್ಲಿ ಚರ್ಚೆಗೆ ತೆಗೆದುಕೊಳ್ಳುವ ಕೆಲ ಗಂಟೆಗಳ ಮೊದಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಚರ್ಚ್ ಧ್ವಂಸಗೊಳಿಸಿರುವ ಘಟನೆ ನಡೆದಿದೆ.
160 ವರ್ಷಗಳಷ್ಟು ಹಳೆಯದಾದ ಸೇಂಟ್ ಜೋಸೆಫ್ ಚರ್ಚಿನಲ್ಲಿದ್ದ ಸೇಂಟ್ ಆಂಥೋನಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಡಿಸೆಂಬರ್ 23ರ ಬೆಳಗ್ಗೆ 5.30ರ ಸುಮಾರಿನಲ್ಲಿ ಚರ್ಚ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ ಎಂದು ಚರ್ಚ್ ನ ಪಾದ್ರಿ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಾಗಲೇ ದುಷ್ಕರ್ಮಿಗಳು ಚರ್ಚ್ ಮೇಲೆ ದಾಳಿ ನಡೆಸಿದ್ದು ವ್ಯಾಪಕ ಖಂಡನೆ ವ್ಯಕ್ತವಾಗಿದೆ.