ಪಂಜಾಬ್ ನಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗಳು ಸಮೀಪಿಸಿರುವಾಗಲೇ ಲೂಧಿಯಾನ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭವಿಸಿದ ಸ್ಫೋಟದ ಹಿಂದೆ ರಾಷ್ಟ್ರ ವಿರೋಧಿ ಶಕ್ತಿಗಳ ಕೈವಾಡವಿದೆ ಎಂದು ಮುಖ್ಯಮಂತ್ರಿ ಚರಂಜಿತ್ ಸಿಂಗ್ ಆರೋಪಿಸಿದ್ದಾರೆ.
ರಾಜ್ಯ ಸರ್ಕಾರ ಎಚ್ಚರಿಕೆಯಿಂದ ಇದೆ. ಸ್ಫೋಟಕ್ಕೆ ಕಾರಣರಾದ ಆರೋಪಿಗಳನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ.
ಅಪರಾಧಿಗಳನ್ನು ಬಿಡುವುದಿಲ್ಲ ಎಂದು ರಾಜ್ಯದ ಜನತೆಗೆ ಭರವಸೆ ನೀಡುತ್ತೇನೆ. ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುವಂತಹ ಕೆಲಸವನ್ನು ಯಾರೇ ಮಾಡಿರಲಿ, ನಾವು ಅವರ ಕ್ರಮ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಚರಂಜಿತ್ ಚೆನ್ನಿ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ನಾಯಕ ಒ.ಪಿ.ಸೊನಿ ಟ್ವೀಟ್ ಮಾಡಿದ್ದು, ಲೂಧಿಯಾನ ಸ್ಫೋಟದ ವಿಷಯ ಕೇಳಿ ದುಃಖವಾಗಿದ್ದು ಕ್ಷಮೆ ಯಾಚಿಸುತ್ತೇನೆ. ಈ ಘಟನೆಗೆ ಯಾರೋ ಒಬ್ಬರನ್ನು ಹೊಣೆ ಮಾಡುವುದಿಲ್ಲ. ರಾಜ್ಯದಲ್ಲಿ ಶಾಂತಿಭಂಗಕ್ಕೆ ಅವಕಾಶ ನೀಡುವುದಿಲ್ಲ. ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿರುವುದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದಾರೆ.
ಲುಧಿಯಾನ ಪೊಲೀಸ್ ಕಮಿಷನರ್ ಖಾಸಗಿ ಚಾನೆಲ್ ವೊಂದಕ್ಕೆ ಹೇಳಿಕೆ ನೀಡಿದ್ದು, ಲುಧಿಯಾನ ನ್ಯಾಯಾಲಯ ಸಂಕೀರ್ಣದ ಎರಡನೇ ಮಹಡಿಯ ದಾಖಲೆಗಳ (ರೆಕಾರ್ಡ್ ರೂಮ್) ಕೊಠಡಿಯ ಬಳಿ ಸ್ಫೋಟದ ಸದ್ದು ಕೇಳಿಬಂದಿದೆ. ಬಾಂಬ್ ನಿಷ್ಕ್ರಿಯ ತಂಡ ಮತ್ತು ವಿಧಿವಿಜ್ಞಾನ ತಂಡವನ್ನು ಚಂಡೀಗಢದಿಂದ ಕರೆಸಲಾಗಿದೆ. ತನಿಖೆ ನಡೆಯುತ್ತಿದ್ದು ಗಾಬರಿಯಾಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಲೂಧಿಯಾನ ಕೋರ್ಟ್‌ನಲ್ಲಿ ನಡೆದ ಸ್ಫೋಟದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳ ಕೆಲಸ ಮಾಡಿವೆ. ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸಲು ಶಾಂತಿಭಂಗ ಚಟುವಟಿಕೆಗಳ ಸರಣಿ ಯೋಜಿಸಲಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಪ್ರಾಣ ಕಳೆದುಕೊಂಡವರಿಗೆ ಸಂತಾಪ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಟ್ವೀಟರ್ ಮೂಲಕ ಪ್ರಾರ್ಥಿಸಿದ್ದಾರೆ.