Thursday, November 21, 2024
Google search engine
Homeಮುಖಪುಟಯುಪಿ, ಗುಜರಾತ್ ಮತಾಂತರ ನಿಷೇಧ ಕಾಯ್ದೆಯ ಯಥಾವತ್ ರೂಪ ರಾಜ್ಯದ್ದು ಕೂಡ - ಸಿದ್ದರಾಮಯ್ಯ

ಯುಪಿ, ಗುಜರಾತ್ ಮತಾಂತರ ನಿಷೇಧ ಕಾಯ್ದೆಯ ಯಥಾವತ್ ರೂಪ ರಾಜ್ಯದ್ದು ಕೂಡ – ಸಿದ್ದರಾಮಯ್ಯ

ಗುಜರಾತ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಗೆ ತಡೆಯಾಜ್ಞೆ ನೀಡಿರುವ ಗುಜರಾತ್ ಹೈಕೋರ್ಟ್, ಅಲ್ಲಿನ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಅಷ್ಟೇ ಅಲ್ಲ ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ. ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೋ ಒಂದು ಕಾಣದ ಕೈ ಇದೆ ಎಂಬ ಅನುಮಾನ ಇದ್ದು ಅದನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಬಲವಂತ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿದ್ದು ರಾಜ್ಯ ಬಿಜೆಪಿ ಸರ್ಕಾರದ ಹೊಸ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ? ಇದೇ ಕಾರಣಕ್ಕೆ ನಾವು ಕಾಯ್ದೆಯನ್ನು ವಿರೋಧ ಮಾಡುತ್ತಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಪ್ರತಿ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ ಹೇಳಿದ್ದಾರೆ.

ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಇದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನ ಮಾಡಲಿಲ್ಲ. ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ ಎಂದರು.

ಭಾರತೀಯ ದಂಡ ಸಂಹಿತೆಯ ಪ್ರಕಾರ ಸಾಕ್ಷಾಧಾರಗಳ ಕೊರತೆ ಕಂಡುಬಂದರೆ ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಈ ಹೊಸ ಮಸೂದೆಯ ನಿಯಮ 12 ರ ಪ್ರಕಾರ ಸಾಕ್ಷಾಧಾರ ಕೊರತೆ ಇದ್ದರೂ ಅದು ದೂರುದಾರನಿಗೆ ಅನುಕೂಲ ಮಾಡಿಕೊಡಲಿದೆ. ಹೀಗಾಗಿ ಇದು ಕಾನೂನಿನ ನಿಯಮಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

ಗುಜರಾತ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಗೆ ತಡೆಯಾಜ್ಞೆ ನೀಡಿರುವ ಗುಜರಾತ್ ಹೈಕೋರ್ಟ್, ಅಲ್ಲಿನ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಅಷ್ಟೇ ಅಲ್ಲ ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ. ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೋ ಒಂದು ಕಾಣದ ಕೈ ಇದೆ ಎಂಬ ಅನುಮಾನ ಇದ್ದು ಅದನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ಶತಮಾನಗಳ ಹಿಂದಿನಿಂದಲೂ ಮತಾಂತರ ನಡೆದುಕೊಂಡು ಬಂದಿದೆ. ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದ ಪಂಪ, ರನ್ನರು ಜೈನ ಧರ್ಮಕ್ಕೆ ಮತಾಂತರಗೊಂಡರು. ಸಾಮ್ರಾಟ್ ಆಶೋಕ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಹೋಗಿಲ್ಲವೇ? ಇದಕ್ಕೆ ಕಾರಣವೇನು ಎಂಬುದು ಯಾರಿಗೂ ತಿಳಿಯದ ವಿಷಯವಲ್ಲ ಎಂದು ಇತಿಹಾಸದ ಉಲ್ಲೇಖ ನೀಡಿದರು.

ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಕ್ರಿಶ್ಚಿಯನ್ ಮತ್ತು ಮುಸ್ಲಿಂಮರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. 2001 ಮತ್ತು 2011 ರ ಜನಗಣತಿ ನೋಡಿದರೆ ಸತ್ಯ ಏನೆಂದು ಅರಿವಾಗುತ್ತದೆ.

2001 ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆಯಲ್ಲಿ 83.86% ಹಿಂದೂಗಳ ಪ್ರಮಾಣ ಇತ್ತು, ಅದು 2011 ಕ್ಕೆ ಶೇ. 84 ಕ್ಕೆ ಏರಿಕೆಯಾಗಿದೆ. ಮುಸ್ಲಿಮರ ಪ್ರಮಾಣ 12.23% ಇಂದ 12.92 ಕ್ಕೆ ಹೆಚ್ಚಾಗಿದೆ. ಕ್ರೈಸ್ತರ ಪ್ರಮಾಣ 1.91% ಇಂದ 1.87% ಗೆ ಇಳಿಕೆಯಾಗಿದೆ. ಇದು ನಮ್ಮ ರಾಜ್ಯದ ವಾಸ್ತವ ಸ್ಥಿತಿ ಎಂದು ಅಂಕಿಸಂಖ್ಯೆ ನೀಡಿದರು.

ಬಲವಂತದಿಂದ, ಆಸೆ ಆಮಿಷ ಒಡ್ಡಿ, ಹೆದರಿಸಿ ಬೆದರಿಸಿ, ಮೋಸದ ಮೂಲಕ ಮತಾಂತರ ಮಾಡುವುದನ್ನು ನಾನು ವಿರೋಧಿಸುತ್ತೇನೆ. ಜೊತೆಗೆ ಜಾತೀಯತೆ, ಅಸ್ಪೃಶ್ಯತೆ ಅನುಸರಿಸುತ್ತಿರುವವರಿಗೂ ಕಠಿಣ ಶಿಕ್ಷೆಯಾಗಬೇಕು ಎಂದರು. ಸರ್ಕಾರದ ಮತಾಂತರ ನಿಷೇಧ ಕಾಯ್ದೆ ಅಮಾನವೀಯ, ಸಂವಿಧಾನ ಬಾಹಿರ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular