ಆರೋಗ್ಯ ನಿರ್ವಹಣೆಯಲ್ಲಿ ಪ್ರಮುಖ ಸಾಧನೆ ಮಾಡಿರುವ ಕೇರಳ ರಾಜ್ಯ ಮತ್ತೊಮ್ಮೆ ಅಗ್ರ ಸ್ಥಾನ ಪಡೆದ ರಾಜ್ಯವಾಗಿ ಹೊರ ಹೊಮ್ಮಿದೆ. ಉತ್ತರ ಪ್ರದೇಶ ಕಳಪೆ ಸ್ಥಾನ ಪಡೆದುಕೊಂಡಿದೆ ಎಂದು ನೀತಿ ಆಯೋಗ ಬಿಡುಗಡೆ ಮಾಡಿರುವ ನಾಲ್ಕನೇ ಆರೋಗ್ಯ ಸೂಚ್ಯಂಕ ತಿಳಿಸಿದೆ.
ನಾಲ್ಕನೇ ಸುತ್ತಿನ ಆರೋಗ್ಯ ಸೂಚ್ಯಂಕವು 2019-20ನೇ ವರ್ಷದ ಅವಧಿಯನ್ನು ಗಣನೆಗೆ ತೆಗೆದುಕೊಂಡಿದೆ ಎಂದು ಸೂಚ್ಯಂಕದಲ್ಲಿ ತಿಳಿಸಿದೆ.
ಇದೇ ವೇಳೆ ಆರೋಗ್ಯ ಸೂಚ್ಯಂಕದಲ್ಲಿ ತಮಿಳುನಾಡು 2ನೇ ಸ್ಥಾನ ಮತ್ತು ತೆಲಂಗಾಣ ಮೂರನೇ ಸ್ಥಾನ ಪಡೆದು ಅತ್ಯುತ್ತಮ ಪ್ರದರ್ಶನ ತೋರಿಸಿವೆ ಎಂದು ಚಿಂತಕರ ಚಾವಡಿ ಹೇಳಿದೆ.
ಮೂಲ ವರ್ಷದಿಂದ(2018-19) ಉಲ್ಲೇಖ ವರ್ಷಕ್ಕೆ (2019-20) ಅತ್ಯಧಿಕವಾಗಿ ಹೆಚ್ಚುತ್ತಿರುವ ಬದಲಾವಣೆಯನ್ನು ದಾಖಲಿಸುವ ಮೂಲಕ ಉತ್ತರ ಪ್ರದೇಶವು ಕಾರ್ಯಕ್ಷಮತೆಯ ವಿಷಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ವರದಿ ತಿಳಿಸಿದೆ.
ಸಣ್ಣ ರಾಜ್ಯಗಳಲ್ಲಿ ಮಿಜೋರಾಂ ಕಾರ್ಯಕ್ಷಮತೆ ಮತ್ತು ಹೆಚ್ಚುತ್ತಿರುವ ಕಾರ್ಯಕ್ಷಮತೆಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿಸಿದೆ.
ಆದರೆ ಕೇಂದ್ರಾಡಳಿತ ಪ್ರದೇಶಗಳಲ್ಲಿ ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರವು ಕಾರ್ಯಕ್ಷಮತೆಯ ದೃಷ್ಟಿಯಿಂದ ಕಳಪೆ ಪ್ರದರ್ಶನ ತೋರಿವೆ. ಆದರೆ ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಪ್ರಮುಖ ಪ್ರದರ್ಶನಕಾರರಾಗಿ ಹೊರಹೊಮ್ಮಿದೆ.
ವಿಶ್ವಬ್ಯಾಂಕ್‌ನ ತಾಂತ್ರಿಕ ನೆರವು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಹಯೋಗದೊಂದಿಗೆ ವರದಿ ಸಿದ್ಧಪಡಿಸಲಾಗಿದೆ.