ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳದ ಕುರಿತು ಕೇಂದ್ರ ಸರ್ಕಾರ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರಗಳನ್ನು ಬರೆದು ಕೊವಿಡ್ ಮತ್ತು ಒಮಿಕ್ರಾನ್ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಹರಿಯಾಣ, ದೆಹಲಿ, ಗುಜರಾತ್, ಜಾರ್ಖಂಡ್, ಕರ್ನಾಟಕ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಆರೋಗ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಕೊವಿಡ್ ಪ್ರಕರಣಗಳು ಹೆಚ್ಚದಂತೆ ಮತ್ತು ದ್ವಿಗುಣಗೊಳ್ಳದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಸೂಚಿಸಿದ್ದಾರೆ.
ಕೊವಿಡ್ ಪರೀಕ್ಷೆ ಹೆಚ್ಚಿಸಲು ಮತ್ತು ಆಸ್ಪತ್ರೆಯನ್ನು ಸನ್ನದ್ದ ಬಲಪಡಿಸಲು, ವ್ಯಾಕ್ಸಿನೇಷನ್ ವ್ಯಾಪ್ತಿ ಹೆಚ್ಚಿಸಲು ಈ ರಾಜ್ಯಗಳಿಗೆ ತಿಳಿಸಲಾಗಿದೆ.
ಆರ್‌ಟಿ-ಪಿಸಿಆರ್ ಮತ್ತು ರಾಪಿಡ್ ಆಂಟಿಜೆನ್ ಟೆಸ್ಟ್ ನಡುವಿನ ಅನುಪಾತ ಕಾಪಾಡಿಕೊಳ್ಳುವುದರೊಂದಿಗೆ ಕೇಂದ್ರೀಕೃತ ರೀತಿಯಲ್ಲಿ ಪರೀಕ್ಷೆ ಹೆಚ್ಚಿಸಲು ಕೇಂದ್ರ ಸರ್ಕಾರ ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಸಕಾರಾತ್ಮಕ ಪ್ರಕರಣಗಳ ಸಂಪರ್ಕಗಳ ಪೂರ್ವಭಾವಿ ಸಂಪರ್ಕ ಪತ್ತೆ ಹಚ್ಚುವಿಕೆ ಮತ್ತು ಪ್ರತ್ಯೇಕತೆ ಮತ್ತು ಸಂಪರ್ಕ ತಡೆ ಕ್ರಮ ಕೈಗೊಳ್ಳುವಂತೆಯೂ ರಾಜ್ಯಗಳಿಗೆ ಸಲಹೆ ನೀಡಲಾಗಿದೆ.
ಕೋವಿಡ್ ನಿಮಯಗಳನ್ನು ಜಾರಿಗೊಳಿಸುವ ಜೊತೆಗೆ ಕೊವಿಡ್ ವ್ಯಾಕ್ಸಿನೇಷನ್ ವೇಗಗೊಳಿಸಲು ರಾಜ್ಯಗಳಿಗೆ ತಿಳಿಸಲಾಗಿದೆ.
ದೇಶದಾದ್ಯಂತ ಒಮಿಕ್ರಾನ್ ಸೋಂಕಿನ ಸಂಖ್ಯೆ 961ಕ್ಕೆ ಏರಿದೆ. ಇದುವರೆಗೆ 22 ರಾಜ್ಯಗಳಲ್ಲಿ ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.


